ಕೇಂದ್ರ ಸಚಿವ ಭಗವಂತ್ ಖೂಬಾ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರಿಂದ ದಾಳಿ: ಓರ್ವನಿಗೆ ಗಾಯ!
ಕರ್ನಾಟಕದ ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿ ನಿನ್ನೆ ಸಂಜೆ ಬಿಜೆಪಿಯ ಎರಡು ಬಣಗಳ ನಡುವೆ ಘರ್ಷಣೆಯಾಗಿದ್ದು ಇದರಲ್ಲಿ ಬಿಜೆಪಿ ಕಾರ್ಯಕರ್ತನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
Published: 14th August 2022 04:18 PM | Last Updated: 14th August 2022 04:18 PM | A+A A-

ಬಿಜೆಪಿ ಕಾರ್ಯಕರ್ತರು
ಕಲಬುರಗಿ: ಕರ್ನಾಟಕದ ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿ ನಿನ್ನೆ ಸಂಜೆ ಬಿಜೆಪಿಯ ಎರಡು ಬಣಗಳ ನಡುವೆ ಘರ್ಷಣೆಯಾಗಿದ್ದು ಇದರಲ್ಲಿ ಬಿಜೆಪಿ ಕಾರ್ಯಕರ್ತನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಲಭ್ಯವಿರುವ ವೀಡಿಯೊ ಕ್ಲಿಪ್ಪಿಂಗ್‌ಗಳ ಪ್ರಕಾರ, ಕೆಲವು ಬಿಜೆಪಿ ಕಾರ್ಯಕರ್ತರು ಬೀದರ್‌ನ ಸಂಸದರೂ ಆಗಿರುವ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ರಾಜ್ಯ ಸಚಿವ ಭಗವಂತ ಖೂಬಾ ಅವರ ಕಾರಿನ ನಂಬರ್ ಪ್ಲೇಟ್ ಅನ್ನು ತೆಗೆದುಹಾಕಿದ್ದಾರೆ.
ಬಸವಕಲ್ಯಾಣದಲ್ಲಿ ನಡೆದ 75ನೇ ಸ್ವಾತಂತ್ರ್ಯ ದಿನಾಚರಣೆಯ ಸ್ಮರಣಾರ್ಥ ಕಾರು ರ್ಯಾಲಿಯಲ್ಲಿ ಪಾಲ್ಗೊಂಡಿದ್ದಾಗ ಈ ಘಟನೆ ನಡೆದಿದೆ. ಕಾರ್ಯಕರ್ತರು ಕಾರಿಗೆ ಘೇರಾವ್ ಹಾಕಿ ನಂಬರ್ ಪ್ಲೇಟ್ ನಿಂದ ಹಲ್ಲೆ ನಡೆಸಿದ್ದಾರೆ.
ಇದನ್ನೂ ಓದಿ: ಬೀದರ್: ಕೇಂದ್ರ ಸಚಿವ ಭಗವಂತ್ ಖೂಬಾ ವಿರುದ್ಧ ರೈತ ಸಂಘಗಳ ಪ್ರತಿಭಟನೆ
ರ್ಯಾಲಿಯಲ್ಲಿ ಶರಣ ಸಲಗರಗೆ ಪ್ರಾಧಾನ್ಯತೆ ನೀಡದಿದ್ದಕ್ಕೆ ಬಸವಕಲ್ಯಾಣ ಶಾಸಕ ಶರಣು ಸಲಗರ ಅನುಯಾಯಿಗಳು ಭಗವಂತ ಖೂಬಾ ಅವರ ಅನುಯಾಯಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಾಯಗೊಂಡ ಕಾರ್ಯಕರ್ತನನ್ನು ಬಿರಾದಾರ್ ಎಂದು ಗುರುತಿಸಲಾಗಿದೆ. ಭಾನುವಾರ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಭಗವಂತ ಖೂಬಾ ಘಟನೆಯನ್ನು ದೃಢಪಡಿಸಿದ್ದಾರೆ. ಅಲ್ಲದೆ ನಾನು ಯಾರ ವಿರುದ್ಧವೂ ಯಾವುದೇ ದೂರು ನೀಡಿಲ್ಲ ಎಂದು ಹೇಳಿದರು. ಘಟನಾ ಸ್ಥಳಕ್ಕೆ ಬೀದರ್ ಎಸ್ಪಿ ಕಿಶೋರಬಾಬು ಡೆಕ್ಕಾ, ಹೆಚ್ಚುವರಿ ಎಸ್ಪಿ ಮಹೇಶ್ ಮೇಘಣ್ಣನವರ್ ಭೇಟಿ ನೀಡಿದ್ದರು.