ಬೆಂಗಳೂರು: ಟೆರೇಸ್ ಮೇಲೆ ರಾಷ್ಟ್ರಧ್ವಜ ಕಟ್ಟುವಾಗ ಆಯತಪ್ಪಿ ಕೆಳಗೆ ಬಿದ್ದು ಟೆಕ್ಕಿ ದುರ್ಮರಣ

ತನ್ನ ಮನೆಯ ಟೆರೇಸ್ ಮೇಲೆ ತ್ರಿವರ್ಣ ಧ್ವಜ ಹಾರಿಸಲು ಪ್ರಯತ್ನಿಸುತ್ತಿದ್ದ 33 ವರ್ಷದ ಸಾಫ್ಟ್ ವೇರ್ ಎಂಜಿನಿಯರ್ ಒಬ್ಬರು ಆಕಸ್ಮಿಕವಾಗಿ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಾಗವಾರದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ತನ್ನ ಮನೆಯ ಟೆರೇಸ್ ಮೇಲೆ ತ್ರಿವರ್ಣ ಧ್ವಜ ಹಾರಿಸಲು ಪ್ರಯತ್ನಿಸುತ್ತಿದ್ದ 33 ವರ್ಷದ ಸಾಫ್ಟ್ ವೇರ್ ಎಂಜಿನಿಯರ್ ಒಬ್ಬರು ಆಕಸ್ಮಿಕವಾಗಿ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಾಗವಾರದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ. ಹೆಚ್ ಬಿಆರ್ ಲೇಔಟ್ ನ 18ನೇ ಮುಖ್ಯರಸ್ತೆಯ ನಿವಾಸಿ ವಿಶು ಕುಮಾರ್ ಮೃತ ದುರ್ದೈವಿಯಾಗಿದ್ದಾರೆ. ಇವರು ಸಾಫ್ಟ್ ವೇರ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಭಾನುವಾರ ಮಧ್ಯಾಹ್ನ 1-45ರ ಸುಮಾರಿನಲ್ಲಿ ಮನೆ ಮೇಲೆ ರಾಷ್ಟ್ರಧ್ವಜ ಹಾರಿಸಲು ಪ್ರಯತ್ನಿಸುತ್ತಿದ್ದಾಗ ಆಯಾತಪ್ಪಿ 30 ಅಡಿ ಎತ್ತರದಿಂದ ಕೆಳಗೆ ಬಿದ್ದು ವಿಶು ಕುಮಾರ್ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಕ್ಷಣ ಆತನನ್ನು ಅವರ ಕುಟುಂಬದ ಸದಸ್ಯರು ಸ್ಥಳೀಯ ಆಸ್ಪತ್ರೆಯೊಂದಕ್ಕೆ ಸಾಗಿಸಿದ್ದಾರೆ. ಆದರೆ, ಅಲ್ಲಿ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ವಿಶು ಕುಮಾರ್ ಕುಟುಂಂಬ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದಿಂದ ಬಂದು ನಾಗವಾರದಲ್ಲಿ ನೆಲೆಸಿದ್ದಾರೆ. ನಾಲ್ಕು  ವರ್ಷದ ಹಿಂದೆ ವಿವಾಹವಾಗಿದ್ದ ಇವರಿಗೆ ಎರಡು ವರ್ಷಗಳ ಮಗುವಿದ್ದು, ತನ್ನ ಕುಟುಂಬದೊಂದಿಗೆ ವಾಸಿಸುತ್ತಿದ್ದರು. ಮೃತನ ತಂದೆ ನಾರಾಯಣ ಭಟ್ ನೀಡಿದ ದೂರಿನ ಆಧಾರದ ಮೇಲೆ ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಲಾಗಿದೆ ಎಂದು ಹೆಣ್ಣೂರು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com