ಕಲುಷಿತ ನೀರಿಗೆ ಮತ್ತೊಂದು ಬಲಿ?: ವಿಜಯನಗರದಲ್ಲಿ ಐದು ವರ್ಷದ ಮಗು ಸಾವು, 10 ಮಂದಿ ಅಸ್ವಸ್ಥ!

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕ್ಯಾಸನಕೇರಿ ಗ್ರಾಮದಲ್ಲಿ ಮಂಗಳವಾರ ಕಲುಷಿತ ನೀರು ಸೇವಿಸಿದ ಐದು ವರ್ಷದ ಬಾಲಕಿ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಗ್ರಾಮಸ್ಥರು ಅಸ್ಸಸ್ಥರಾಗಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹೊಸಪೇಟೆ: ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕ್ಯಾಸನಕೇರಿ ಗ್ರಾಮದಲ್ಲಿ ಮಂಗಳವಾರ ಕಲುಷಿತ ನೀರು ಸೇವಿಸಿದ ಐದು ವರ್ಷದ ಬಾಲಕಿ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಗ್ರಾಮಸ್ಥರು ಅಸ್ಸಸ್ಥರಾಗಿದ್ದಾರೆ.  ಆಗಸ್ಟ್ 13 ರಂದು ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮೃತ ಬಿಂದು ಎನ್ ಸೋಮವಾರ ಮೃತಪಟ್ಟಿದ್ದಾರೆ.  ಕಲುಷಿತ ನೀರು ಸೇವನೆಯೇ ಕಾರಣ ಎಂದು ಶಂಕಿಸಲಾಗಿದೆ.

ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ಈ ವರ್ಷ ಮುಂಗಾರು ಆರಂಭವಾದ ನಂತರ ಕಲುಷಿತ ನೀರಿನಿಂದಾಗಿ ಸಾವನ್ನಪ್ಪಿದ ಇದು ಮೂರನೇ ಘಟನೆಯಾಗಿದೆ. ವಿಜಯನಗರ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದರು.

ನೀರಿನ ಮಾದರಿಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. ಪ್ರಯೋಗಾಲಯದ ವರದಿಗಾಗಿ ಕಾಯುತ್ತಿದ್ದೇವೆ ಎಂದು ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ತಿಳಿಸಿದ್ದಾರೆ. ಮೊದಲು ಅತಿಸಾರ ಬೇಧಿ ಉಂಟಾದ ನಂತರ ಬಾಲಕಿ ಸಾವನ್ನಪ್ಪಿದ್ದಾಳೆ.

ನೀರು ಕುಡಿದ ನಂತರ ಬಾಲಕ ಅಸ್ವಸ್ಥಗೊಂಡಿದ್ದಾಳೆ ಎಂದು ಗ್ರಾಮಸ್ಥರು ಮತ್ತು ಕುಟುಂಬಸ್ಥರು ತಿಳಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಹೇಳಿದ್ದಾರೆ, 15ಕ್ಕೂ ಹೆಚ್ಚು ಮಂದಿ ನಿರ್ಜಲೀಕರಣ ಹಾಗೂ ವಾಂತಿಭೇದಿಯಿಂದ ಬಳಲುತ್ತಿದ್ದಾರೆ. ಕಲುಷಿತ ಕುಡಿಯುವ ನೀರಿನ ಸೇವನೆಯೇ ಇದಕ್ಕೆ ಕಾರಣ ಎಂದು ಶಂಕಿಸಲಾಗಿದೆ.

ಗ್ರಾಮದಲ್ಲಿ ವೈದ್ಯರ ತಂಡದೊಂದಿಗೆ ತಾತ್ಕಾಲಿಕ ಆಸ್ಪತ್ರೆಯನ್ನು ಸ್ಥಾಪಿಸಲಾಗಿದ್ದು, ಅಧಿಕಾರಿಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ನಿರ್ಜಲೀಕರಣ, ವಾಂತಿ, ಜ್ವರದ ಲಕ್ಷಣಗಳನ್ನು ಹೊಂದಿರುವ ಜನರನ್ನು ಚಿಕಿತ್ಸೆಗಾಗಿ ತಾತ್ಕಾಲಿಕ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ, ಎಂದು ಅವರು ಹೇಳಿದರು.

ಶುದ್ಧೀಕರಿಸಿದ ಕುಡಿಯುವ ನೀರನ್ನು ಗ್ರಾಮಸ್ಥರಿಗೆ ಜಿಲ್ಲಾಡಳಿತ ಪೂರೈಸುತ್ತಿದೆ. ಕುಡಿಯುವ ನೀರಿನ ಬಗ್ಗೆ ಅರಿವು ಮೂಡಿಸುವುದು, ಕುದಿಸಿದ ನೀರನ್ನು ಕುಡಿಯಲು ಜನರಿಗೆ ಶಿಕ್ಷಣ ನೀಡುವುದು ಮತ್ತು ಇತರ ಕ್ರಮಗಳನ್ನು ಪ್ರಾರಂಭಿಸಲಾಗಿದೆ. ಆರೋಗ್ಯ ಕಾರ್ಯಕರ್ತರು, ಜಿಲ್ಲಾಡಳಿತ ಸಿಬ್ಬಂದಿ ಹಾಗೂ ವೈದ್ಯರು ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ ಎಂದು ಮತ್ತೊಬ್ಬ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣಗಳ ವಿವರ

  • ಮೇ 2021- ವಿಜಯನಗರ ಜಿಲ್ಲೆಯ ಮಕರಬ್ಬಿ ಗ್ರಾಮದಲ್ಲಿ ಏಳು ಮಂದಿ ಸಾವನ್ನಪ್ಪಿ, ಸುಮಾರು 60 ಗ್ರಾಮಸ್ಥರು ಆಸ್ಪತ್ರೆಗೆ ದಾಖಲಾಗಿದ್ದರು.
  • ಜುಲೈ 2022- ಬಳ್ಳಾರಿ ಜಿಲ್ಲೆಯ ಗೋನಾಳ್ ಗ್ರಾಮದಲ್ಲಿ 11 ವರ್ಷದ ಬಾಲಕಿ ಸಾವನ್ನಪ್ಪಿದ್ದು, ಕಲುಷಿತ ನೀರು ಸೇವಿಸಿ 35 ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು.
  • ಆಗಸ್ಟ್ 2022- ಬಳ್ಳಾರಿ ಜಿಲ್ಲೆಯ ಅಂಕನಾಲ್ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 85 ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com