ಚುನಾವಣೆ ಸಮೀಪಿಸುತ್ತಿದ್ದಂತೆ ಯಡಿಯೂರಪ್ಪಗೆ ಸ್ಥಾನಮಾನ, ಬಿಜೆಪಿ ಸಂಸದೀಯ ಮಂಡಳಿಗೆ ನೇಮಕ

ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ಸಂಸದೀಯ ಮಂಡಳಿಗೆ ನೇಮಕ ಮಾಡಲಾಗಿದ್ದು, ಈ ಮೂಲಕ ಲಿಂಗಾಯತ ಪ್ರಭಾವಿ ನಾಯಕ ಯಡಿಯೂರಪ್ಪ ಅವರನ್ನು ಸೈಡ್...
ಯಡಿಯೂರಪ್ಪ
ಯಡಿಯೂರಪ್ಪ

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ಸಂಸದೀಯ ಮಂಡಳಿಗೆ ನೇಮಕ ಮಾಡಲಾಗಿದ್ದು, ಈ ಮೂಲಕ ಲಿಂಗಾಯತ ಪ್ರಭಾವಿ ನಾಯಕ ಯಡಿಯೂರಪ್ಪ ಅವರನ್ನು ಸೈಡ್ ಲೈನ್ ಮಾಡಿಲ್ಲ ಎಂಬ ಸಂದೇಶ ರವಾನಿಸಲಾಗಿದೆ.

ಬಿಜೆಪಿ ಹೈಕಮಾಂಡ್ ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಪಕ್ಷದ ಸಂಸದೀಯ ಮಂಡಳಿಯಿಂದ ಕೈಬಿಟ್ಟಿದೆ ಮತ್ತು ಬಿಎಸ್ ಯಡಿಯೂರಪ್ಪ ಹಾಗೂ ಇಕ್ಬಾಲ್ ಸಿಂಗ್ ಲಾಲ್ಪುರ ಸೇರಿದಂತೆ ಆರು ಹೊಸ ನಾಯಕರಿಗೆ ಸ್ಥಾನ ನೀಡಲಾಗಿದೆ.

ಕೇಂದ್ರ ಸಚಿವರಾದ ಸರ್ಬಾನಂದ ಸೋನೊವಾಲ್, ಕೆ ಲಕ್ಷ್ಮಣ್, ಸುಧಾ ಸದಾವ್ ಮತ್ತು ಸತ್ಯನಾರಾಯಣ್ ಜಟಿಯಾ ಅವರನ್ನು ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ. 

ಇಕ್ಬಾಲ್ ಸಿಂಗ್ ಲಾಲ್ಪುರ ಅವರು ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯಾಗಿ ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಸ್ಥಾನ ಪಡೆದ ಮೊದಲ ಸಿಖ್ ವ್ಯಕ್ತಿಯಾಗಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಬಿಜೆಪಿ ಸಂಸದೀಯ ಮಂಡಳಿಯ ಇತರ ಸದಸ್ಯರಾಗಿದ್ದಾರೆ.

ಬಿಜೆಪಿ ಸಂಸದೀಯ ಮಂಡಳಿಯು ಪಕ್ಷದ ಅತ್ಯುನ್ನತ ನಿರ್ಧಾರಗಳನ್ನು ಕೈಗೊಳ್ಳುವ ಮಂಡಳಿಯಾಗಿದ್ದು, ಈ ಮಂಡಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಮುಖ್ಯಸ್ಥರಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com