ಹಿಜಾಬ್ ನಂತರ ಗಣೇಶ ಹಬ್ಬದ ಹೆಸರಿನಲ್ಲಿ ಹೊಸ ಬೇಡಿಕೆ; ವಕ್ಫ್ ಬೋರ್ಡ್ ಮನವಿಗೆ ಶಿಕ್ಷಣ ಸಚಿವರು ಹೇಳಿದ್ದೇನು?

ಹಿಜಾಬ್ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಮ್ಮೆ ಧರ್ಮ ಸಂಘರ್ಷ ಎದುರಾಗಿದ್ದು, ಗಣೇಶ ಹಬ್ಬದ ಹೆಸರಿನಲ್ಲಿ ವಕ್ಫ್ ಬೋರ್ಡ್ ಶಿಕ್ಷಣ ಇಲಾಖೆ ಮುಂದೆ ಇಟ್ಟಿದ್ದ ಹೊಸ ಬೇಡಿಕೆಯನ್ನು ಸಚಿವ ಬಿ.ಸಿ.ನಾಗೇಶ್ ತಿರಸ್ಕರಿಸಿದ್ದಾರೆ.
ಶಿಕ್ಷಣ ಸಚಿವ ಬಿಸಿ ನಾಗೇಶ್
ಶಿಕ್ಷಣ ಸಚಿವ ಬಿಸಿ ನಾಗೇಶ್

ಬೆಂಗಳೂರು: ಹಿಜಾಬ್ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಮ್ಮೆ ಧರ್ಮ ಸಂಘರ್ಷ ಎದುರಾಗಿದ್ದು, ಗಣೇಶ ಹಬ್ಬದ ಹೆಸರಿನಲ್ಲಿ ವಕ್ಫ್ ಬೋರ್ಡ್ ಶಿಕ್ಷಣ ಇಲಾಖೆ ಮುಂದೆ ಇಟ್ಟಿದ್ದ ಹೊಸ ಬೇಡಿಕೆಯನ್ನು ಸಚಿವ ಬಿ.ಸಿ.ನಾಗೇಶ್ ತಿರಸ್ಕರಿಸಿದ್ದಾರೆ.

ಹಿಜಾಬ್ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಮ್ಮೆ ಧರ್ಮ ಸಂಘರ್ಷ ಎದುರಾಗಿದ್ದು, ಗಣೇಶ ಹಬ್ಬದ ಹೆಸರಿನಲ್ಲಿ ವಕ್ಫ್ ಬೋರ್ಡ್ ಶಿಕ್ಷಣ ಇಲಾಖೆ ಮುಂದೆ ಹೊಸ ಬೇಡಿಕೆ ಇಟ್ಟಿದ್ದು, ಗಣೇಶ ಹಬ್ಬಕ್ಕೆ ಅನುಮತಿ ಇದೆ ಎಂದಾದರೂ ಶಾಲೆಗಳಲ್ಲಿ ನಮಾಜ್ ಗೂ ಅವಕಾಶ ಕೊಡಿ ಎಂದು ಆಗ್ರಹಿಸಿದೆ. ಶಾಲೆಯಲ್ಲಿ ಇಸ್ಲಾಮಿಕ್ ಧಾರ್ಮಿಕ ಅವಕಾಶ ನೀಡಬೇಕು ಎಂದು ವಕ್ಫ್ ಬೋರ್ಡ್ ಶಿಕ್ಷಣ ಇಲಾಖೆ ಮುಂದೆ ಹೊಡ ಬೇಡಿಕೆ ಇಟ್ಟಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಶಾಲೆಗಳಲ್ಲಿ ಯಾವುದೇ ಧಾರ್ಮಿಕ ಆಚರಣೆಗೆ ಅನುಮತಿ ನೀಡಿಲ್ಲ, ಅವಕಾಶ ನೀಡುವುದೂ ಇಲ್ಲ. ಯಾವುದೇ ಕಾರಣಕ್ಕೂ ಯಾವುದೇ ಧರ್ಮದ ಆಚರಣೆಗೆ ಸರ್ಕಾರ ಅವಕಾಶ ನೀಡುವುದಿಲ್ಲ. ವಕ್ಫ್​​​ ಬೋರ್ಡ್ ಬೇಡಿಕೆಗಳನ್ನು ಸರ್ಕಾರ ಪುರಸ್ಕರಿಸುವುದಿಲ್ಲ. ಶಾಲೆಗಳಲ್ಲಿ ಗಣಪತಿ ಹಬ್ಬ ಆಚರಣೆ ಸರ್ಕಾರ ಜಾರಿಗೆ ತಂದಿದ್ದಲ್ಲ. ಸ್ವಾತಂತ್ರ್ಯ ಪೂರ್ವದಿಂದಲೂ ಶಾಲೆಗಳಲ್ಲಿ ಗಣಪತಿ ಮೂರ್ತಿ ಇಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಹೊಸ ಬೇಡಿಕೆ ಮುಂದಿಟ್ಟ ವಕ್ಫ್ ಬೋರ್ಡ್
ಗಣೇಶ ಹಬ್ಬದ ಹೆಸರಿನಲ್ಲಿ ವಕ್ಫ್ ಬೋರ್ಡ್ ಶಿಕ್ಷಣ ಇಲಾಖೆ ಮುಂದೆ ಹೊಸ ಬೇಡಿಕೆಗಳನ್ನು ಇಟ್ಟಿದ್ದು, ಶಾಲೆಗಳಲ್ಲಿ ನಮಾಜ್‌ಗೆ ಪ್ರತ್ಯೇಕ ಕೊಠಡಿ ಮೀಸಲಿಡಬೇಕು, ನಮ್ಮ ಧಾರ್ಮಿಕ ಹಬ್ಬಗಳ ಆಚರಣೆಗೂ ಅವಕಾಶ ಮಾಡಿಕೊಡಬೇಕು, ಎಲ್ಲಾ ಧರ್ಮದ ಮಕ್ಕಳಿಗೂ ಸಮಾನ ಅವಕಾಶ ಸಿಗಬೇಕು, ಗಣೇಶ ಹಬ್ಬದಂತೆ ಈದ್ ಮಿಲಾದ್ ಹಬ್ಬದ ಆಚರಣೆಗೂ ಅವಕಾಶ ಕೊಡಬೇಕು, ಪ್ರತಿ ಮಕ್ಕಳಿಗೂ ಧರ್ಮದ ಕುರಿತು ಅರಿವು ಮೂಡಿಸಬೇಕು, ನೈತಿಕ ಶಿಕ್ಷಣ ಅಡಿ ಧಾರ್ಮಿಕ ಪಾಠ ಮಕ್ಕಳಿಗೆ ನೀಡಬೇಕು ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಫಿ ಸಾ ಅದಿ ಅವರು ಬೇಡಿಕೆ ಇಟ್ಟಿದ್ದಾರೆ.

ಶಿಕ್ಷಣ ಸಚಿವರ ತೀರ್ಮಾನವನ್ನು ನಾವು ಸ್ವಾಗತಿಸುತ್ತೇವೆ. ಹಿಜಾಬ್ ವಿವಾದ ಆದಾಗಲೂ ನಾವು ಒಂದು ವಿಷಯ ಸ್ಪಷ್ಟ ಪಡಿಸಿದ್ದೇವೆ. ಧಾರ್ಮಿಕ‌ ವಿಚಾರಗಳನ್ನು ತಿಳಿಸುವ ಮೂಲಕ ಅಪನಂಬಿಕೆ ಹೋಗಲಾಡಿಸಬೇಕು. ಎಲ್ಲಾ ಧಾರ್ಮಿಕ ಆಚರಣೆಗಳಿಗೂ ಅವಕಾಶ ಮಾಡಿಕೊಡಬೇಕು. ಗಣೇಶೋತ್ಸವಕ್ಕೆ ಅವಕಾಶ ಕೊಟ್ಟ ರೀತಿಯಲ್ಲೇ ಇಸ್ಲಾಮಿಕ್ ಧಾರ್ಮಿಕ ಅವಕಾಶಕ್ಕೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com