ಶೃಂಗೇರಿಯ ಶಾರದಾಂಬೆ ಅಮ್ಮನವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
ಶೃಂಗೇರಿಯ ಶಾರದಾಂಬೆ ಅಮ್ಮನವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ 'ಮುಸ್ಲಿಂ ಏರಿಯಾ' ಹೇಳಿಕೆ: ಕೊಡಗು ನಂತರ ಚಿಕ್ಕಮಗಳೂರಿನಲ್ಲೂ ಪ್ರತಿಭಟನೆ ಬಿಸಿ

ಶಿವಮೊಗ್ಗದಲ್ಲಿ ಮೊನ್ನೆ ಸ್ವಾತಂತ್ರ್ಯ ದಿನಾಚರಣೆ ದಿನ ವೀರ ಸಾವರ್ಕರ್ ಫ್ಲೆಕ್ಸ್ ಹಾಕಿದ ವಿಚಾರದಲ್ಲಿ ಗಲಾಟೆಯಾಗಿ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ನೀಡಿದ್ದ ಮುಸ್ಲಿಂ ಏರಿಯಾ ವಿವಾದಾತ್ಮಕ ಹೇಳಿಕೆ ಹಿಂದೂ ಸಂಘಟನೆಗಳ ಕಾರ್ಯಕರ್ತರು, ಬಿಜೆಪಿ ಆರ್ ಎಸ್ ಎಸ್ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಚಿಕ್ಕಮಗಳೂರು: ಶಿವಮೊಗ್ಗದಲ್ಲಿ ಮೊನ್ನೆ ಸ್ವಾತಂತ್ರ್ಯ ದಿನಾಚರಣೆ ದಿನ ವೀರ ಸಾವರ್ಕರ್ ಫ್ಲೆಕ್ಸ್ ಹಾಕಿದ ವಿಚಾರದಲ್ಲಿ ಗಲಾಟೆಯಾಗಿ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ನೀಡಿದ್ದ ಮುಸ್ಲಿಂ ಏರಿಯಾ ವಿವಾದಾತ್ಮಕ ಹೇಳಿಕೆ ಹಿಂದೂ ಸಂಘಟನೆಗಳ ಕಾರ್ಯಕರ್ತರು, ಬಿಜೆಪಿ ಆರ್ ಎಸ್ ಎಸ್ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ.

ನಿನ್ನೆ ಕೊಡಗು ಜಿಲ್ಲೆಗೆ ಮಳೆಹಾನಿ ಪ್ರದೇಶಗಳ ವೀಕ್ಷಣೆಗೆಂದು ತೆರಳಿದ್ದ ಸಿದ್ದರಾಮಯ್ಯನವರಿಗೆ ಬಿಜೆಪಿ ಯುವಮೋರ್ಚಾ ಸದಸ್ಯರು ಕಪ್ಪು ಬಾವುಟ ಪ್ರದರ್ಶನ ಮಾಡಿದ್ದರು. ನಂತರ ಕುಶಾಲನಗರಕ್ಕೆ ಅಪರಾಹ್ನ ತೆರಳುತ್ತಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯನವರ ಕಾರಿಗೆ ಮೊಟ್ಟೆ ಎಸೆದಿದ್ದು ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಯಿತು.

ಇಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ, ಮೂಡಿಗೆರೆ ಮೊದಲಾದ ತಾಲ್ಲೂಕುಗಳಿಗೆ ಸಿದ್ದರಾಮಯ್ಯ ಭೇಟಿ ನೀಡುತ್ತಿದ್ದಾರೆ. ಕೊಡಗಿನ ನಂತರ ಇದೀಗ ಚಿಕ್ಕಮಗಳೂರಿನಲ್ಲೂ ಅವರ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ. ಪೊಲೀಸ್ ಭದ್ರತೆಯ ನಡುವೆಯೂ ಜಿಲ್ಲೆಯ ಕೊಪ್ಪ ತಾಲೂಕಿನ ಮಕ್ಕಿಕೊಪ್ಪ ಗ್ರಾಮದಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ.

ಹಿಂದೂ ವಿರೋಧಿ ಸಿದ್ದರಾಮಯ್ಯ ಈ ಪುಣ್ಯಭೂಮಿಗೆ ಬರುವುದು ಬೇಡ ಎಂದು ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಭೇಟಿ ನಂತರ ಸಿದ್ದರಾಮಯ್ಯ ಅವರು ಶೃಂಗೇರಿ ಕ್ಷೇತ್ರಕ್ಕೆ ಹೋದರು.

ವೀರ ಸಾವರ್ಕರ್ ಅವರ ಭಾವಚಿತ್ರವನ್ನು ಸ್ವಾತಂತ್ರ್ಯ ದಿನಾಚರಣೆಯಂದು ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿ ಹಾಕಲಾಗಿತ್ತು. ಇದಕ್ಕೆ ಮುಸ್ಲಿಂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಮುಸ್ಲಿಮರಿಗೆ ಸೆಡ್ಡು ಹೊಡೆದ ಹಿಂದೂ ಸಂಘಟನೆಗಳು ಗಾಂಧಿ ಬಜಾರ್ ಬಳಿ ಜಮಾಯಿಸಿ ಪ್ರತಿಭಟನೆ ಮುಂದಾದರು. ಈ ವೇಳೆ ಪ್ರೇಮ್ ಸಿಂಗ್ ಎಂಬವರಿಗೆ ಚಾಕು ಇರಿಯಲಾಗಿತ್ತು. ಈ ಬಗ್ಗೆ ಹೇಳಿಕೆ ನೀಡುತ್ತಾ ಮುಸ್ಲಿಂ ಏರಿಯಾಗಳಲ್ಲಿ ಯಾಕೆ ಸಾವರ್ಕರ್ ಅವರ ಫೋಟೋ ಹಾಕಿದ್ದೀರಿ ಎಂದು ಪ್ರಶ್ನಿಸಿದ್ದರು. ಈ ಹೇಳಿಕೆ ಹೊರಬೀಳುತ್ತಿದ್ದಂತೆ ಹಿಂದೂ ಸಂಘಟನೆಗಳು, ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದು, ಸಿದ್ದರಾಮಯ್ಯ ಹೋದಲ್ಲಿ ಬಂದಲ್ಲಿ ಗೋ ಬ್ಯಾಕ್ ಘೋಷಣೆ ಕೂಗಲಾಗುತ್ತಿದೆ.

Related Stories

No stories found.

Advertisement

X
Kannada Prabha
www.kannadaprabha.com