ಉಡುಪಿ: ವೀರ್ ಸಾವರ್ಕರ್ ಪ್ರತಿಮೆ ಸ್ಥಾಪಿಸಲು ಬಿಜೆಪಿ ಮುಖಂಡರಿಂದ ಮನವಿ

ಉಡುಪಿಯ ಬ್ರಹ್ಮಗಿರಿ ವೃತ್ತದಲ್ಲಿ ಕಳೆದ ಬುಧವಾರ ವೀರ್ ಸಾವರ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಉಡುಪಿಯ ಸಿಎಂಸಿ ಆಯುಕ್ತ ಉದಯ ಶೆಟ್ಟಿ ಅವರಿಗೆ ಗುರುವಾರ ಅದೇ ಸ್ಥಳದಲ್ಲಿ ಸಾವರ್ಕರ್ ಪ್ರತಿಮೆ ನಿರ್ಮಿಸಲು ಮನವಿ ಸಲ್ಲಿಸಿದ್ದಾರೆ.
ಹಿಂದೂ ಕಾರ್ಯಕರ್ತರು
ಹಿಂದೂ ಕಾರ್ಯಕರ್ತರು

ಉಡುಪಿ: ಉಡುಪಿಯ ಬ್ರಹ್ಮಗಿರಿ ವೃತ್ತದಲ್ಲಿ ಕಳೆದ ಬುಧವಾರ ವೀರ್ ಸಾವರ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಉಡುಪಿಯ ಸಿಎಂಸಿ ಆಯುಕ್ತ ಉದಯ ಶೆಟ್ಟಿ ಅವರಿಗೆ ಗುರುವಾರ ಅದೇ ಸ್ಥಳದಲ್ಲಿ ಸಾವರ್ಕರ್ ಪ್ರತಿಮೆ ನಿರ್ಮಿಸಲು ಮನವಿ ಸಲ್ಲಿಸಿದ್ದಾರೆ.

ಆಗಸ್ಟ್ 15ರಂದು ಉಡುಪಿ ನಗರದ ಅಜ್ಜರಕಾಡು ವಾರ್ಡ್‌ನ ಬ್ರಹ್ಮಗಿರಿ ವೃತ್ತದಲ್ಲಿ ಕಟೌಟ್ ಹಾಕಿರುವುದನ್ನು ಆಕ್ಷೇಪಿಸಿ ಉಡುಪಿಯ ಪಿಎಫ್‌ಐ ಸದಸ್ಯ ಮೊಹಮ್ಮದ್ ಜುರೈಝ್ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಸಾವರ್ಕರ್ ಅವರ ಪ್ರತಿಮೆ ಸ್ಥಾಪಿಸುವಂತೆ ನೋಡಿಕೊಳ್ಳುವುದಾಗಿ ಸುವರ್ಣ ಬುಧವಾರ ಹೇಳಿದ್ದರು. ಇನ್ನು ಇದು ಘರ್ಷಣೆಗೆ ಕಾರಣವಾಗಬಹುದು ಎಂಬ ಮುನ್ನೆಚ್ಚರಿಕೆ ಕ್ರಮವಾಗಿ ಭದ್ರತೆಯನ್ನು ಹೆಚ್ಚಿಸಲಾಗಿತ್ತು.

ನಗರದಲ್ಲಿ ಸದ್ಯ ಯಾವುದೇ ಪ್ರತಿಮೆ ಅಳವಡಿಸುವ ಪ್ರಸ್ತಾವನೆ ಸಿಎಂಸಿ ಬಳಿ ಇಲ್ಲ ಎಂದು ಶೆಟ್ಟಿ ಹೇಳಿದರು. ನಗರದಲ್ಲಿ ಯಾವುದೇ ಪ್ರತಿಮೆ ಅಳವಡಿಸಬೇಕಾದರೂ ಉಡುಪಿ ಸಿಎಂಸಿಯ ಸಾಮಾನ್ಯ ಸಭೆಯಲ್ಲಿ ನಿರ್ಣಯ ಅಂಗೀಕರಿಸಿ ನಂತರ ಪೊಲೀಸರು ನಿರಾಕ್ಷೇಪಣಾ ಪ್ರಮಾಣಪತ್ರ(ಎನ್ ಒಸಿ) ನೀಡಬೇಕು ಎಂದು ಮೂಲಗಳು ತಿಳಿಸಿವೆ.

ಇದು ಅನಗತ್ಯ ಜಗಳಕ್ಕೆ ಕಾರಣವಾಗುವುದರಿಂದ ಪ್ರತಿಮೆಗೆ ಅನುಮತಿ ನೀಡುವ ಸಾಧ್ಯತೆಯಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸಾವರ್ಕರ್ ಅವರ ಕಟೌಟ್‌ನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಉಡುಪಿ ಜಿಲ್ಲಾ ಪಿಎಫ್‌ಐ ಅಧ್ಯಕ್ಷ ಫಯಾಜ್ ಅಹ್ಮದ್, ಕಟೌಟ್ ತೆಗೆಯದಿದ್ದರೆ ಪಿಎಫ್‌ಐ ಪ್ರತಿಭಟನೆ ನಡೆಸಲಿದೆ ಎಂದು ಹೇಳಿದ್ದಾರೆ. 'ಗೊಂದಲ ಸೃಷ್ಟಿಸುವ ಉದ್ದೇಶದಿಂದ ಹಾಕಿರುವ ಕಟೌಟ್‌ಗೆ ಪೊಲೀಸರು ರಕ್ಷಣೆ ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಹೇಳಿದ್ದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಉಡುಪಿ ಎಸ್ಪಿ ಅಕ್ಷಯ್ ಎಂ ಹಾಕಯ್ಯ ಅವರಿಗೆ ಜಿಲ್ಲಾ ಕಾಂಗ್ರೆಸ್ ಕಚೇರಿ ಸುತ್ತ ನೀಡಲಾಗಿದ್ದ ಪೊಲೀಸ್ ಭದ್ರತೆಯನ್ನು ಹಿಂಪಡೆಯುವಂತೆ ಮನವಿ ಪತ್ರ ಸಲ್ಲಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com