ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ನಾನೇ, ನಾನು ಕಾಂಗ್ರೆಸ್ ಕಾರ್ಯಕರ್ತ: ಆರೋಪಿ ಸಂಪತ್
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ನಾನೇ, ನಾನು ಬಿಜೆಪಿಯಲ್ಲ, ಕಾಂಗ್ರೆಸ್ ಕಾರ್ಯಕರ್ತ ಎಂದು ಬಂಧಿತ ಆರೋಪಿ ಸಂಪತ್ ಹೇಳಿದ್ದಾರೆ.
Published: 20th August 2022 03:36 PM | Last Updated: 20th August 2022 04:43 PM | A+A A-

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ
ಕೊಡಗು: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ನಾನೇ, ನಾನು ಬಿಜೆಪಿಯಲ್ಲ, ಕಾಂಗ್ರೆಸ್ ಕಾರ್ಯಕರ್ತ ಎಂದು ಬಂಧಿತ ಆರೋಪಿ ಸಂಪತ್ ಹೇಳಿದ್ದಾರೆ.
ಈ ಹಿಂದೆ ಕೊಡಗಿನ ನೆರೆಹಾನಿ ಪ್ರದೇಶಗಳಿಗೆ ಸಿದ್ದರಾಮಯ್ಯ ಭೇಟಿ ನೀಡಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಆರೋಪಿ ಸಂಪತ್ ಸಿದ್ದು ಕಾರಿನತ್ತ ಮೊಟ್ಟೆ ತೂರಿದ್ದರು. ಈ ವಿಡಿಯೋ ವ್ಯಾಪಕ ವೈರಲ್ ಅಗಿತ್ತು. ಇದರ ಬೆನ್ನಲ್ಲೇ ಬಿಜೆಪಿ ವಿರುದ್ಧ ತೀವ್ರ ಕಿಡಿಕಾರಿದ್ದ ಕಾಂಗ್ರೆಸ್ ಪ್ರತಿಭಟನೆಯ ಎಚ್ಚರಿಕೆ ನೀಡಿತ್ತು. ಸಿದ್ದರಾಮಯ್ಯ ಕೂಡ ಬಿಜೆಪಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಅವರ ಭದ್ರತೆ ಹೆಚ್ಚಿಸುವಂತೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದರು.
ಮೊಟ್ಟೆ ಎಸೆತ ಪ್ರಕರಣಕ್ಕೆ ಟ್ವಿಸ್ಟ್, ಎಸೆದಿದ್ದು ಕಾಂಗ್ರೆಸ್ ಕಾರ್ಯಕರ್ತ
ಇನ್ನು ಸಿದ್ದು ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ತಿರುವು ದೊರೆತಿದ್ದು, ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ನಾನೇ, ನಾನು ಬಿಜೆಪಿಯಲ್ಲ, ಕಾಂಗ್ರೆಸ್ ಕಾರ್ಯಕರ್ತ ಎಂದು ಬಂಧಿತ ಆರೋಪಿ ಸಂಪತ್ ಹೇಳಿದ್ದಾರೆ.
Here is the purported video of Sampath, who reportedly threw eggs on #Siddaramaiah's car claiming to be a #Congress worker. pic.twitter.com/SNuXmTZ8re
— Mahesh Chitnis (@Mahesh_Chitnis) August 20, 2022
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಸಂಪತ್, 'ನಾನು ಕಾಂಗ್ರೆಸ್ ಕಾರ್ಯಕರ್ತನೆ, ಕಾಂಗ್ರೆಸ್ನಲ್ಲಿ ಹಿಂದೂಗಳಿಲ್ವಾ? ವಿಪಕ್ಷ ನಾಯಕ ಸಿದ್ದರಾಮಯ್ಯ ಹಿಂದೂಗಳೂ ದನದ ಮಾಂಸ ತಿಂತಾರೆ ಅಂದಿದ್ದು ತಪ್ಪಲ್ವಾ? ಹಿಂದೂ ವಿರೋಧಿ ಹೇಳಿಕೆಯಿಂದ ನೋವಾಗಿತ್ತು. ಹೀಗಾಗಿ ಮೊಟ್ಟೆ ಹೊಡೆದಿದ್ದೆ ಎಂದು ಸಂಪತ್ ಹೇಳಿದ್ದಾನೆ.
ಇದನ್ನೂ ಓದಿ: ಸಿದ್ದರಾಮಯ್ಯ ಹತ್ಯೆಗೆ RSS, ಬಿಜೆಪಿ ಸಂಚು: ಶಿವರಾಮ್ ಗಂಭೀರ ಆರೋಪ; ತಂದೆಗೆ ಜೀವ ಬೆದರಿಕೆ ಇದೆ ಎಂದ ಯತೀಂದ್ರ ಸಿದ್ದರಾಮಯ್ಯ
ಆರೋಪಿ ಸಂಪತ್ನನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ಕುಶಾಲನಗರ ಜೆಎಂಎಫ್ಸಿ ನ್ಯಾಯಾಲಯ ಆವರಣದಲ್ಲಿ ಬಂಧಿಸಿದ್ದಾರೆ. ಬಂಧನಕ್ಕೂ ಮೊದಲು ಸಂಪತ್ ಈ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ.