ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 987 ಸೇರಿ ರಾಜ್ಯದಲ್ಲಿ 1,465 ಮಂದಿಗೆ ಪಾಸಿಟಿವ್; 2 ಸಾವು

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,465 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,43,564ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,465 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,43,564ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಇಬ್ಬರು ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,176ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 987 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,59,935ಕ್ಕೆ ಏರಿಕೆಯಾಗಿದೆ. ಆದರೆ ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 1,295 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,92,637ಕ್ಕೆ ಏರಿಕೆಯಾಗಿದೆ. ಇನ್ನು 10,709 ಸಕ್ರಿಯ ಪ್ರಕರಣಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com