ದಕ್ಷಿಣ ಕನ್ನಡ: ಡೇಂಜರಸ್ ರಸ್ತೆ ಗುಂಡಿಯಿಂದ ಕೆಎಸ್ ಆರ್ ಟಿ ಸಿ ಬಸ್ ಪ್ರಯಾಣಿಕನ ಕುತ್ತಿಗೆ ಮತ್ತು ಸ್ಪೈನಲ್ ಕಾರ್ಡ್ ಗೆ ಪೆಟ್ಟು!

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಕೆಎಸ್‌ಆರ್‌ಟಿಸಿ ಬಸ್ ರಸ್ತೆಯಲ್ಲಿದ್ದ ಗುಂಡಿಗೆ ಇಳಿದ ಪರಿಣಾಮ ಪ್ರಯಾಣಿಕರೊಬ್ಬರ ಬೆನ್ನುಹುರಿ ಮತ್ತು ಕುತ್ತಿಗೆಗೆ ಗಂಭೀರ ಗಾಯಗಳಾಗಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಕೆಎಸ್‌ಆರ್‌ಟಿಸಿ ಬಸ್ ರಸ್ತೆಯಲ್ಲಿದ್ದ ಗುಂಡಿಗೆ ಇಳಿದ ಪರಿಣಾಮ ಪ್ರಯಾಣಿಕರೊಬ್ಬರ ಬೆನ್ನುಹುರಿ ಮತ್ತು ಕುತ್ತಿಗೆಗೆ ಗಂಭೀರ ಗಾಯಗಳಾಗಿವೆ.

ಕಲ್ಲಡ್ಕ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುವ ರಸ್ತೆಯ ಗುಂಡಿಗೆ ಬಸ್ ಇಳಿದಿದೆ. ಹಿಂಬದಿಯ ಸೀಟಿನಲ್ಲಿ ಪ್ರಯಾಣಿಸುತ್ತಿದ್ದ ವಿಜಯ್ ಎಂಬಾತ ಬಿದ್ದಿದ್ದು, ಆತನ ಕುತ್ತಿಗೆ ಮತ್ತು ಸ್ಪೈನಲ್ ಕಾರ್ಡ್ ಗೆ ಪೆಟ್ಟು ಬಿದ್ದಿದೆ. ಆಗಸ್ಟ್ 17 ರಂದು ವಿಜಯ್ ಮಂಗಳೂರಿನಲ್ಲಿ ಕೆಲಸ ಮುಗಿಸಿ ಬೆಳ್ಳಾರೆಗೆ ವಾಪಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ವಿಜಯ್ ಅವರ ಬೆನ್ನುಹುರಿ ಮತ್ತು ಕುತ್ತಿಗೆಯ ನರಕ್ಕೆ ಹಾನಿಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ನನ್ನ ದುಸ್ಥಿತಿಗೆ ಬಸ್ ಚಾಲಕ ಮತ್ತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೊಣೆಯಾಗಿದ್ದಾರೆ. ನನ್ನ ದೇಹದ ಕೆಳಭಾಗವು ನಿಶಕ್ತವಾಗಿದೆ. ನನ್ನ ಹೆಂಡತಿ ಮತ್ತು ಮಕ್ಕಳನ್ನು ಯಾರು ನೋಡಿಕೊಳ್ಳುತ್ತಾರೆ ಎಂಬ ಚಿಂತೆ ನನ್ನನ್ನು ಕಾಡುತ್ತಿದೆ ಎಂದು ವಿಜಯ್ ಅಳಲು ತೋಡಿಕೊಂಡಿದ್ದಾರೆ.

ಬಸ್ಸಿನ ಚಾಲಕ ಅಬ್ದುಲ್ ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 279 (ಸಾರ್ವಜನಿಕ ಮಾರ್ಗದಲ್ಲಿ ರ್ಯಾಶ್ ಡ್ರೈವಿಂಗ್), 283 ಮತ್ತು 337 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com