ಶೀಘ್ರದಲ್ಲೇ ರಾಜ್ಯದಲ್ಲಿ ವಿಧಿ ವಿಜ್ಞಾನ ಶಾಸ್ತ್ರ ವಿವಿ ಸ್ಥಾಪನೆ: ಆರಗ ಜ್ಞಾನೇಂದ್ರ

ಇಡೀ ದಕ್ಷಿಣ ಭಾರತದಲ್ಲಿ ಪ್ರಪ್ರಥಮ ಬಾರಿಗೆ ಕರ್ನಾಟಕದಲ್ಲಿ ವಿಧಿ ವಿಜ್ಞಾನ ಶಾಸ್ತ್ರ ವಿಶ್ವ ವಿದ್ಯಾಲಯ  ಸ್ಥಾಪಿಸಲು  ಕೇಂದ್ರ ಸರ್ಕಾರದ  ಒಪ್ಪಿಗೆ ಪಡೆಯಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ

ಕೆಜಿಎಫ್: ಇಡೀ ದಕ್ಷಿಣ ಭಾರತದಲ್ಲಿ ಪ್ರಪ್ರಥಮ ಬಾರಿಗೆ ಕರ್ನಾಟಕದಲ್ಲಿ ವಿಧಿ ವಿಜ್ಞಾನ ಶಾಸ್ತ್ರ ವಿಶ್ವ ವಿದ್ಯಾಲಯ  ಸ್ಥಾಪಿಸಲು  ಕೇಂದ್ರ ಸರ್ಕಾರದ  ಒಪ್ಪಿಗೆ ಪಡೆಯಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಕೆಜಿಎಫ್ ನಲ್ಲಿ ರಾಜ್ಯ ಪೊಲೀಸ್ ವಸತಿ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದಿಂದ ನೂತನವಾಗಿ ನಿರ್ಮಿಸಲಾಗಿರುವ ಡಿಎಆರ್ ಆಡಳಿತ ಕಚೇರಿ, ಶಸ್ತ್ರಾಗಾರ ಹಾಗೂ ಶ್ವಾನ ದಳ ಕಟ್ಟಡಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಎಲ್ಲಾ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು, ಅನುಮತಿ ಪಡೆದ ನಂತರ ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದ ವಿಧಿ ವಿಜ್ಞಾನ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲಾಗುವುದು ಎಂದರು. 

ಈಗ ಹೈದರಾಬಾದ್‌ನಲ್ಲಿ ಎಫ್‌ಎಸ್‌ಎಲ್ ವಿಶ್ವವಿದ್ಯಾನಿಲಯವಿದ್ದು, ಅದೇ ರೀತಿಯಲ್ಲಿ ಎಲ್ಲಾ ಆಧುನಿಕ ಮತ್ತು ಉನ್ನತೀಕರಿಸಿದ ಸೌಲಭ್ಯಗಳೊಂದಿಗೆ ಇದನ್ನು ಪ್ರಾರಂಭಿಸಲಾಗುವುದು, ಇದರಿಂದ ವಿದ್ಯಾರ್ಥಿ ಸಮುದಾಯಕ್ಕೆ ವರದಾನವಾಗಲಿದೆ ಎಂದು ಜ್ಞಾನೇಂದ್ರ ಹೇಳಿದರು.

ಹಣಕ್ಕಾಗಿ ಕೆಲವು ಅಧಿಕಾರಿಗಳು ಇತರ ರಾಷ್ಟ್ರದ ಜನರಿಗೆ ಆಧಾರ್ ಕಾರ್ಡ್ ನೀಡುತ್ತಿರುವುದು ಅಪರಾಧಕ್ಕೆ ಕಾರಣವಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಅಂತಹ ಅಧಿಕಾರಿಗಳು ಕ್ರಮ ಎದುರಿಸಬೇಕಾಗುತ್ತದೆ ಎಂದು ಈಗಾಗಲೇ ಸೂಚನೆಗಳನ್ನು ನೀಡಲಾಗಿದೆ ಮತ್ತು ಅಪರಾಧಗಳನ್ನು ತಕ್ಷಣವೇ  ಕಂಡುಹಿಡುವಲ್ಲಿ ರಾಜ್ಯ ಪೊಲೀಸರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು. 

ಪೊಲೀಸ್ ಪೊಲೀಸರಿಗೆ ಡಬಲ್ ಬೆಡ್ ಮನೆ ನೀಡಲು ಸರ್ಕಾರ ಉತ್ಸುಕವಾಗಿದೆ ಎಂದು ಹೇಳಿದ ಗೃಹ ಸಚಿವರು ಮತ್ತು ರಾಜ್ಯಾದ್ಯಂತ ಹೊಸ ಪೊಲೀಸ್ ಠಾಣೆಗಳನ್ನು ನಿರ್ಮಿಸಲು ಮತ್ತು ಮನೆಗಳನ್ನು ನಿರ್ಮಿಸಲು ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದಕ್ಕಾಗಿ ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಡಿಜಿಪಿ ಅರುಣ್ ಜೆ ಚಕ್ರವರ್ತಿ ಅವರನ್ನು ಶ್ಲಾಘಿಸಿದರು. 

ಪಿಎಸ್‌ಐ ಹಗರಣದ ಹಿನ್ನೆಲೆಯಲ್ಲಿ ನೇಮಕಾತಿ ವಿಳಂಬವಾಗಿದೆ, ಶೀಘ್ರದಲ್ಲೇ ಮರು ಪರೀಕ್ಷೆ ನಡೆಸಲಾಗುವುದು ಮತ್ತು ಪಿಎಸ್‌ಐ ನೇಮಕಾತಿಗೆ ಹೊಸ ಅಧಿಸೂಚನೆಯನ್ನು ಕರೆಯಲಾಗುವುದು ಎಂದು ಹೇಳಿದ ಸಚಿವರು, ಪೊಲೀಸ್ ಇಲಾಖೆಯಲ್ಲಿ ಶೇ. 35% ಹುದ್ದೆಗಳ ಖಾಲಿಯಿತ್ತು.  ಈಗ ಅದನ್ನು ಶೇಕಡಾ 12ಕ್ಕೆ ಇಳಿಸಲಾಗಿದೆ ಎಂದರು.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com