ತುಮಕೂರು ಜಿಲ್ಲೆಯ ಶಿರಾ ಬಳಿ ಭೀಕರ ರಸ್ತೆ ಅಪಘಾತ: 9 ಮಂದಿ ದುರ್ಮರಣ, 13 ಮಂದಿಗೆ ಗಾಯ

ರಾಜ್ಯದಲ್ಲಿ ಅಪಘಾತ ಘಟನೆ ಮುಂದುವರಿದಿದೆ. ಗುರುವಾರ ನಸುಕಿನ ಜಾವ ತುಮಕೂರು ಜಿಲ್ಲೆಯ ಶಿರಾ ಹತ್ತಿರ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದಾರೆ. 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ತಕ್ಷಣಕ್ಕೆ ಶಿರಾದಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಲ್ಲಿ ನುಜ್ಜುಗುಜ್ಜಾದ ಕ್ರೂಸರ್
ಅಪಘಾತದಲ್ಲಿ ನುಜ್ಜುಗುಜ್ಜಾದ ಕ್ರೂಸರ್

ತುಮಕೂರು: ರಾಜ್ಯದಲ್ಲಿ ಅಪಘಾತ ಘಟನೆ ಮುಂದುವರಿದಿದೆ. ಗುರುವಾರ ನಸುಕಿನ ಜಾವ ತುಮಕೂರು ಜಿಲ್ಲೆಯ ಶಿರಾ ಹತ್ತಿರ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದಾರೆ. 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ತಕ್ಷಣಕ್ಕೆ ಶಿರಾದಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾರಿಗೆ ಕ್ರೂಸರ್ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದ್ದು, ಕ್ರೂಸರ್ ನಲ್ಲಿದ್ದವರೆಲ್ಲಾ ರಾಯಚೂರು ಜಿಲ್ಲೆಯ ಕೂಲಿ ಕಾರ್ಮಿಕರು ಎಂದು ತಿಳಿದುಬಂದಿದೆ.ರಾಯಚೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಈ ಘೋರ ದುರಂತ ಸಂಭವಿಸಿದೆ. 

ಅಪಘಾತ ಹೇಗಾಯಿತು?: ನಸುಕಿನ ಜಾವ ರಾಯಚೂರು ಜಿಲ್ಲೆಯ ಹಾಗೂ ಉತ್ತರ ಕರ್ನಾಟಕದ ಬಡ ಕೂಲಿ ಕಾರ್ಮಿಕರನ್ನು ಹೊತ್ತ ಕ್ರೂಸರ್ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿತ್ತು. ಶಿರಾ ಬಳಿ ಬರುತ್ತಿದ್ದಾಗ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಚಾಲಕ ನಿಯಂತ್ರಣ ಕಳೆದುಕೊಂಡು ಡಿಕ್ಕಿಯಾಗಿ ಸ್ಥಳದಲ್ಲಿಯೇ 9 ಜನ ಕಾರ್ಮಿಕರು ಮೃತಪಟ್ಟಿದ್ದಾರೆ.

ಈ ಅಪಘಾತ ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ನಡೆದಿದೆ. ಕ್ರೂಸರ್​ನಲ್ಲಿ 20 ಜನರಿದ್ದು, ರಾಯಚೂರು ಜಿಲ್ಲೆಯರು ಎನ್ನಲಾಗುತ್ತಿದೆ. ಮೃತರಲ್ಲಿ ಮೂವರು ಮಹಿಳೆಯರು, ನಾಲ್ವರು ಪುರುಷರು, ಇಬ್ಬರು ಮಕ್ಕಳು ಸೇರಿ ಒಟ್ಟು 9 ಮಂದಿ ಸ್ಥಳದಲ್ಲೇ ಅಸುನೀಗಿದ್ದಾರೆ.  11 ಜನ ಗಾಯಾಳುಗಳನ್ನ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಗದಗದಲ್ಲಿ ಅಪಘಾತ: ನಿನ್ನೆ ಸಾಯಂಕಾಲ ಸರ್ಕಾರಿ ಬಸ್ ಹರಿದು ಬೈಕ್‌ ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗದಗ ನಗರದ ಹೊರವಲಯದ ಹೊಂಬಳ ರಸ್ತೆಯಲ್ಲಿ ನಡೆದಿದೆ. ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಚಿಕಿತ್ಸೆಗೆ ಗದಗ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮೃತ ಬೈಕ್ ಸವಾರ ಗದಗ ತಾಲೂಕಿನ ಲಿಂಗದಾಳ ಗ್ರಾಮದ ನಿವಾಸಿ ಹನುಮಂತಪ್ಪ ಛಲವಾದಿ(48) ಎಂದು ಗುರುತಿಸಲಾಗಿದೆ. ಹನುಮಂತಪ್ಪ ತನ್ನ ಅಳಿಯ ರೋಹಿತ್ ಜೊತೆಗೆ ಲಿಂಗದಾಳ ಗ್ರಾಮದಿಂದ ಬೈಕ್ ಹಿಂಬದಿ ಕುಳಿತು ಗದಗಕ್ಕೆ ಹೊರಟಿದ್ದರು. ಈ ವೇಳೆ ನಗರದ ಹೊರವಲಯದಲ್ಲಿ ಟ್ರ್ಯಾಕ್ಟರ್ ಅನ್ನು ಓವರ್ ಟೇಕ್ ಮಾಡಲು ಹೋಗಿ ಗದಗದಿಂದ ಬರುತ್ತಿದ್ದ ಬಸ್‌ಗೆ ಡಿಕ್ಕಿಯಾಗಿ ದುರ್ಘಟನೆ ನಡೆದಿದೆ.

ಬೈಕ್ ಸವಾರ ರೋಹಿತ್‌ಗೆ ಸಣ್ಣಪುಟ್ಟ ಗಾಯಳಾಗಿದ್ದು, ಹಿಂಬದಿ ಕುಳಿತ ಹನುಮಂತಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ. ಬಸ್‌ನಲ್ಲಿದ್ದ 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com