ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಸೂಚನೆ

ಚಾಮರಾಜಪೇಟೆ ಈದ್ಗಾ ಮೈದಾನ ಮಾಲೀಕತ್ವ ವಿವಾದಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಇಂದು ತೀರ್ಪು ನೀಡಿದೆ.
ಈದ್ಗಾ ಮೈದಾನ
ಈದ್ಗಾ ಮೈದಾನ

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನ ಮಾಲೀಕತ್ವ ವಿವಾದಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಇಂದು ತೀರ್ಪು ನೀಡಿದೆ.

ವಿವಾದಿತ ಈದ್ಗಾ ಮೈದಾನವನ್ನು ಆಟದ ಮೈದಾನವಾಗಿ ಮಾತ್ರ ಬಳಸಬೇಕೆಂದು ನ್ಯಾಯಮೂರ್ತಿ ಹೇಮಂತ್  ಚಂದನ್ ಗೌಡರ್ ತೀರ್ಪು ನೀಡಿದ್ದು, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 23ಕ್ಕೆ ಮುಂದೂಡಿದ್ದಾರೆ. 

ರಂಜಾನ್, ಬಕ್ರೀದ್ ವೇಳೆ ಪ್ರಾರ್ಥನೆಗೆ ಬಳಸಲು ಅವಕಾಶ ನೀಡಿರುವ ನ್ಯಾಯಾಲಯ, ಬೇರೆ ಯಾವುದೇ ರೀತಿಯ ಆಚರಣೆಗೆ ಬಳಸದಂತೆ ಸ್ಪಷ್ಟಪಡಿಸಿದೆ. ಇದರಿಂದಾಗಿ ಈ ಬಾರಿ ಗಣೇಶೋತ್ಸವ ಆಚರಣೆಗೆ ಅವಕಾಶ ಸಿಗದಂತಾಗಿದೆ.

ಈ ಬಾರಿ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಅವಕಾಶ ನೀಡುವಂತೆ ಹಲವು ಸಂಘ ಸಂಸ್ಥೆಗಳು ಬೇಡಿಕೆ ಇಟ್ಟಿದ್ದವು.ಆದರೆ, ನ್ಯಾಯಾಲಯದ ತೀರ್ಪು ಈ ಸಂಘಟನೆಗಳಿಗೆ ಹಿನ್ನೆಡೆ ಆಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com