ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ: ಸಚಿವ ಆರ್ ಅಶೋಕ್

ನಾವು ಮೊದಲ‌ ಬಾರಿಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಮಾಡಿದ್ದೇವೆ. ಮುಂದೆ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಆದೇಶ ಹೊರಡಿಸುವನಿದ್ದೇನೆ ಎಂದು ಕಂದಾಯ ಸಚಿವ ಆರ್. ಅಶೋಕ್....
ಆರ್ ಅಶೋಕ್
ಆರ್ ಅಶೋಕ್

ಬೆಂಗಳೂರು: ನಾವು ಮೊದಲ‌ ಬಾರಿಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಮಾಡಿದ್ದೇವೆ. ಮುಂದೆ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಆದೇಶ ಹೊರಡಿಸುವನಿದ್ದೇನೆ ಎಂದು ಕಂದಾಯ ಸಚಿವ ಆರ್. ಅಶೋಕ್ ಅವರು ಗುರುವಾರ ಹೇಳಿದ್ದಾರೆ.

ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚಾಮರಾಜಪೇಟೆಯಲ್ಲಿ ಗಣೇಶ ಮೂರ್ತಿ ಕೂರಿಸುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ಇವಾಗ ಗಣೇಶೋತ್ಸವದ ಬಗ್ಗೆ ನಾನು ಕೂಡ ಗಂಭೀರವಾಗಿ ಆಲೋಚನೆ ಮಾಡುತ್ತೇನೆ ಎಂದು ಹೇಳಿದರು.

ಚಾಮರಾಜಪೇಟೆಯಲ್ಲಿ ಗಣೇಶ ಮೂರ್ತಿ ಕೂರಿಸುವ ಬಗ್ಗೆ ನನಗೆ ಯಾವುದೇ ಮನವಿಗಳು ಬಂದಿಲ್ಲ. ಡಿಸಿಗಳಿಗೆ ಕೊಟ್ಟಿದ್ರೆ ಅವರು ಸೂಕ್ತ ಸೂಚನೆ ಕೊಡ್ತಾರೆ. ಕಾನೂನು ಸುವ್ಯವಸ್ಥೆ ಬಹಳ ಪ್ರಮುಖ ಆಗಿದೆ. ಗಣೇಶ ಕೂರಿಸುವ ಸಂಬಂಧ ಇಂದು ಪೊಲೀಸರು, ಬಿಬಿಎಂಪಿ ಅಧಿಕಾರಿಗಳು ಸಭೆ ಮಾಡ್ತಿದ್ದಾರೆ. ಇದರ ಬಗ್ಗೆ ಗಂಭೀರವಾಗಿ ಚಿಂತನೆ ಮಾಡಬೇಕಿದೆ ಎಂದರು.

ಅಧಿಕಾರಿಗಳಿಂದಲೂ ‌ನಾನು ಮಾಹಿತಿ ಪಡೆದಿದ್ದೇನೆ. ಯಾವ ಸಂದರ್ಭದಲ್ಲಿ ಏನು‌ ಕ್ರಮ ತಗೊಬೇಕು ಎಂದು ಸೂಕ್ತ ನಿರ್ಧಾರ ಮಾಡ್ತೇವೆ. ಸೂಕ್ತ ಕಾಲ ಸೂಕ್ತ ಸಮಯ ನೋಡಿಕೊಂಡು ತೀರ್ಮಾನ ಮಾಡ್ತೀವಿ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com