ಸೆಪ್ಟೆಂಬರ್ 12 ರಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ

ಸೆಪ್ಟೆಂಬರ್ 12ರಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಸೆಪ್ಟೆಂಬರ್ 12ರಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ವಿಧಾನಸೌಧದಲ್ಲಿ 10 ದಿನಗಳ ಕಾಲ ಅಧಿವೇಶನ ನಡೆಯಲಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಪರಿಹಾರ, ಹೈಕೋರ್ಟ್ ಆದೇಶದಂತೆ ಭ್ರಷ್ಟಾಚಾರ ನಿಗ್ರಹ ದಳ, ಲೋಕಾಯುಕ್ತದೊಂದಿಗೆ ವಿಲೀನವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಅಂತಿಮ ಅಧಿಸೂಚನೆ ಪ್ರಕಟಿಸುವ ಸಾಧ್ಯತೆಯಿದೆ.

ಸರ್ಕಾರ ವಿರುದ್ಧ ಗುತ್ತಿಗೆದಾರರ ಸಂಘ ಕಮಿಷನ್ ಆರೋಪ ಮಾಡಿದ ನಂತರ ವಿಧಾನಮಂಡಲ ಅಧಿವೇಶನ ಕರೆಯಬೇಕೆಂದು ವಿಪಕ್ಷ ಕಾಂಗ್ರೆಸ್ ತೀವ್ರ ಒತ್ತಾಯಿಸಿತ್ತು. ಈ ಬಾರಿಯ ಅಧಿವೇಶನದಲ್ಲಿ ಸರ್ಕಾರದ ಮೇಲಿನ ಕಮಿಷನ್ ಆರೋಪ, ಕರಾವಳಿ ಸೇರಿದಂತೆ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಧರ್ಮ ದಂಗಲ್, ಮಳೆ, ಪ್ರವಾಹ ವಿಪತ್ತು ಪರಿಹಾರ ಕುರಿತು ಆಡಳಿತ ಮತ್ತು ವಿಪಕ್ಷಗಳ ಮಧ್ಯೆ ತೀವ್ರ ಚರ್ಚೆ, ಕೋಲಾಹಲ ನಡೆಯುವ ಸಾಧ್ಯತೆಯಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com