ಶಿರಾ ಬಳಿ ಅಪಘಾತ: ಮೃತರ ಕುಟುಂಬಸ್ಥರಿಗೆ 2 ಲಕ್ಷ, ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ ಪ್ರಧಾನಿ, ಸಿಎಂ ಕಂಬನಿ

ತುಮಕೂರು ಜಿಲ್ಲೆಯ ಶಿರಾ ಬಳಿಯ ಕಳ್ಳಂಬೆಳ್ಳದಲ್ಲಿ ಗುರುವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ 9 ಮಂದಿ ಕೂಲಿ ಕಾರ್ಮಿಕರ ಕುಟುಂಬಸ್ಥರಿಗೆ ಪ್ರಧಾನ ಮಂತ್ರಿ ನೈಸರ್ಗಿಕ ವಿಕೋಪ ಪರಿಹಾರ ನಿಧಿ (PMNRF) ಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.
ಶಿರಾ ಬಳಿ ಸಂಭವಿಸಿದ ಭೀಕರ ಅಪಘಾತದ ದೃಶ್ಯ
ಶಿರಾ ಬಳಿ ಸಂಭವಿಸಿದ ಭೀಕರ ಅಪಘಾತದ ದೃಶ್ಯ

ನವದೆಹಲಿ: ತುಮಕೂರು ಜಿಲ್ಲೆಯ ಶಿರಾ ಬಳಿಯ ಕಳ್ಳಂಬೆಳ್ಳದಲ್ಲಿ ಗುರುವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ 9 ಮಂದಿ ಕೂಲಿ ಕಾರ್ಮಿಕರ ಕುಟುಂಬಸ್ಥರಿಗೆ ಪ್ರಧಾನ ಮಂತ್ರಿ ನೈಸರ್ಗಿಕ ವಿಕೋಪ ಪರಿಹಾರ ನಿಧಿ (PMNRF) ಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. 

ಘಟನೆ ಬಗ್ಗೆ ತೀವ್ರ ಕಂಬನಿ ಮಿಡಿದಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮವರನ್ನು ಕಳೆದುಕೊಂಡವರ ಕುಟುಂಬಸ್ಥರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ.

ರಾಷ್ಟ್ರಪತಿ ಕಂಬನಿ: ಅಪಘಾತಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಸಂತಾಪ ಸೂಚಿಸಿದ್ದಾರೆ.

ಸಿಎ ಬೊಮ್ಮಾಯಿ ಸಂತಾಪ: ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸಿಎಂ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವಿಗೀಡಾಗಿ ಹಲವರು ಗಾಯಗೊಂಡಿರುವ ವಿಷಯ ತಿಳಿದು ತೀವ್ರ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com