ಕೋವಿಡ್-19 ಸಾಂದರ್ಭಿಕ ಚಿತ್ರ
ಕೋವಿಡ್-19 ಸಾಂದರ್ಭಿಕ ಚಿತ್ರ

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 668 ಸೇರಿ ರಾಜ್ಯದಲ್ಲಿ 1,191 ಮಂದಿಗೆ ಪಾಸಿಟಿವ್; 3 ಸಾವು

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,191 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,47,296ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,191 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,47,296ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಮೂವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,185ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 668 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,62,146ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾರೂ ಮೃತಪಟ್ಟಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 2,032 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,99,213ಕ್ಕೆ ಏರಿಕೆಯಾಗಿದೆ. ಇನ್ನು 7,856 ಸಕ್ರಿಯ ಪ್ರಕರಣಗಳಿವೆ.

Related Stories

No stories found.

Advertisement

X
Kannada Prabha
www.kannadaprabha.com