ಬಿಡಿಸಿಸಿ ಬ್ಯಾಂಕ್ 7.74 ಕೋಟಿ ರೂ.ಲಾಭ: ಸಚಿವ ಎಸ್.ಟಿ. ಸೋಮಶೇಖರ್ ಶ್ಲಾಘನೆ
ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಬಿಡಿಸಿಸಿ ಬ್ಯಾಂಕ್) 7.74 ಕೋಟಿ ರೂ. ಲಾಭ ಗಳಿಸುವ ಮೂಲಕ ಸಾಲ ವಿತರಣೆ ಮತ್ತು ಸಾಲ ವಸೂಲಾತಿಯಲ್ಲಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದೆ ಎಂದು ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಹೇಳಿದ್ದಾರೆ.
Published: 26th August 2022 09:11 PM | Last Updated: 26th August 2022 09:13 PM | A+A A-

ಎಸ್ ಟಿ ಸೋಮಶೇಖರ್
ಬೆಂಗಳೂರು: ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಬಿಡಿಸಿಸಿ ಬ್ಯಾಂಕ್) 7.74 ಕೋಟಿ ರೂ. ಲಾಭ ಗಳಿಸುವ ಮೂಲಕ ಸಾಲ ವಿತರಣೆ ಮತ್ತು ಸಾಲ ವಸೂಲಾತಿಯಲ್ಲಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದೆ ಎಂದು ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಹೇಳಿದ್ದಾರೆ.
ಚಾಮರಾಜಪೇಟೆಯಲ್ಲಿನ ಬ್ಯಾಂಕ್ ನ ಕೇಂದ್ರ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಸರ್ಕಾರ ನಿಗದಿಪಡಿಸಿರುವ ಸಾಲದ ಗುರಿಯನ್ನು ತಲುಪಬೇಕು. ಸಾಲ ವಿತರಣೆಯಲ್ಲಿ ಯಾವುದೇ ತಾರತಮ್ಯ ಮಾಡಬಾರದು, ಅರ್ಹ ರೈತರೆಲ್ಲರಿಗೂ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆಯಾಗಬೇಕು ಎಂದರು.
ಈ ವರ್ಷ ಬ್ಯಾಂಕ್ ಗೆ 818 ಕೋಟಿ ರೂ. ಕೃಷಿ ಸಾಲ ವಿತರಿಸುವ ಗುರಿ ನೀಡಲಾಗಿದ್ದು, ಏಪ್ರಿಲ್ ನಿಂದ ಇಲ್ಲಿಯವರೆಗೂ 200 ಕೋಟಿ ರೂ. ಗಳಷ್ಟು ಅಲ್ಪಾವಧಿ ಕೃಷಿ ಸಾಲ, 12 ಕೋಟಿ ರೂ. ಮಧ್ಯಮಾವಧಿ ಸಾಲ ವಿತರಣೆ ಮಾಡಲಾಗಿದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.