ಮುರುಘಾ ಶ್ರೀಗಳ ಮೇಲೆ ಎಫ್ ಐಆರ್, ತನಿಖೆ ನಂತರ ಸತ್ಯ ಹೊರಬೀಳಲಿದೆ- ಸಿಎಂ ಬಸವರಾಜ ಬೊಮ್ಮಾಯಿ

ಮುರುಘಾ ಶ್ರೀಗಳ ಮೇಲೆ ಪೋಕ್ಸೋ ಅಡಿ ಎಫ್ ಐ ಆರ್ ದಾಖಲಾಗಿದ್ದು, ತನಿಖೆಯ ನಂತರ ಸತ್ಯ ಹೊರಬೀಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುರುಘಾ ಶ್ರೀಗಳ ಮೇಲೆ ಪೋಕ್ಸೋ ಅಡಿ ಎಫ್ ಐ ಆರ್ ದಾಖಲಾಗಿದ್ದು, ತನಿಖೆಯ ನಂತರ ಸತ್ಯ ಹೊರಬೀಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ತಮ್ಮ ನಿವಾಸದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯವಿದೆ. ತನಿಖೆ ನಂತರ ಸತ್ಯ ಹೊರಗೆ ಬರಲಿದೆ ಎಂದರು.

ಇದೊಂದು ಪ್ರಮುಖ ಪ್ರಕರಣವಾಗಿದ್ದು, ಚಿತ್ರದುರ್ಗದಲ್ಲಿ ಕಿಡ್ನಾಪ್ ಪ್ರಕರಣವೂ ದಾಖಲಾಗಿದೆ. ಎರಡೂ ಪ್ರಕರಣಗಳನ್ನು ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ನಾವು ಮಾತನಾಡುವುದಾಗಲಿ, ವ್ಯಾಖ್ಯಾನ ಮಾಡುವುದಾಗಲಿ ತನಿಖೆ ದೃಷ್ಟಿಯಿಂದ ಸರಿಯಲ್ಲ ಎಂದು ಹೇಳಿದರು.

ಮಳೆ, ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ: ಅತಿ ಹೆಚ್ಚು ಮಳೆಯಾಗಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಇಂದು ಸಂಜೆ ಮಾತನಾಡಿ, ಸ್ಥಿತಿಗತಿ ನೋಡಿ ಹೆಚ್ಚಿನ ಪರಿಹಾರ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಶೀಘ್ರ ನಿರ್ಣಯ: ಚಾಮರಾಜಪೇಟೆ ಈದ್ಗಾ ಮೈದಾನದ ಬಗ್ಗೆ ಗೊಂದಲ ಏನಿಲ್ಲ. ಗಣೇಶೋತ್ಸವ ಆಚರಿಸುವ ಬಗ್ಗೆ ಕಂದಾಯ ಸಚಿವರು ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ. ಅರ್ಜಿಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅದಾದ  ಕೂಡಲೇ ನಿರ್ಣಯ ಮಾಡುತ್ತೇವೆ ಎಂದು ಮುಖ್ಯಮಂತ್ರಿ ತಿಳಿಸಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com