ಮಳೆಯಿಂದ ಹಾನಿಗೊಳಗಾದ ಮನೆಗಳ ದುರಸ್ತಿಗೆ ತಕ್ಷಣ 10 ಸಾವಿರ ರೂ. ಪರಿಹಾರ: ಸಿಎಂ ಬೊಮ್ಮಾಯಿ

ರಾಜ್ಯದೆಲ್ಲೆಡೆ ಮತ್ತೆ ಪ್ರವಾಹ ರೀತಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಲವು ಕಡೆಗಳಲ್ಲಿ ಅವಾಂತರಗಳು ಆಗಿವೆ. ಈ ಬಗ್ಗೆ 16 ಜಿಲ್ಲೆಗಳಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಸ್ಥಿತಿಯನ್ನು ಸರಿಪಡಿಸಲು ಸೂಚನೆ ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದೆಲ್ಲೆಡೆ ಮತ್ತೆ ಪ್ರವಾಹ ರೀತಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಲವು ಕಡೆಗಳಲ್ಲಿ ಅವಾಂತರಗಳು ಆಗಿವೆ. ಈ ಬಗ್ಗೆ 16 ಜಿಲ್ಲೆಗಳಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಸ್ಥಿತಿಯನ್ನು ಸರಿಪಡಿಸಲು ಸೂಚನೆ ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೆಂಗಳೂರು-ಮೈಸೂರು ಹೆದ್ದಾರಿ ರಸ್ತೆ ಅವಾಂತರದ ಬಗ್ಗೆ ಮಾಹಿತಿ ಪಡೆದಿದ್ದೇನೆ. ಅಲ್ಲಲ್ಲಿ ನೀರು ನಿಂತಿರುವುದರಿಂದ, ವಾಹನಗಳಿಗೆ ಹೋಗಲು ಅನುಕೂಲವಾಗುವಂತೆ ಪರ್ಯಾಯ ಮಾರ್ಗಕ್ಕೆ ಎಸ್‌ಪಿಗಳಿಗೆ ಸೂಚನೆ ನೀಡಿದ್ದೇನೆ, ಇಂದು ರಾಮನಗರಕ್ಕೆ ಭೇಟಿ ನೀಡಿ ಅಲ್ಲಿನ ಮಳೆ ಸಂಬಂಧಿ ಪರಿಸ್ಥಿತಿಗಳನ್ನು ಪರಾಮರ್ಶಿಸಲಿದ್ದೇನೆ ಎಂದು ತಿಳಿಸಿದ್ದಾರೆ.

ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ಮಾಡಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತ ನೀರನ್ನು ತೆರವುಗೊಳಿಸಲು ಸೂಚನೆ ನೀಡಲಾಗಿದೆ. ಮೈಸೂರು ಡಿಸಿ ಹಾಗೂ ಉತ್ತರ ಕರ್ನಾಟಕ ಭಾಗಗಳಲ್ಲೂ ಸೂಚನೆ ನೀಡಿದ್ದೇನೆ. ಮಳೆಯಿಂದ ಕೆರೆ ಕಟ್ಟೆಗಳಿಂದಾಗುವ ಅಪಾಯಗಳನ್ನು ತಪ್ಪಿಸಲು ಅವುಗಳ ಮೇಲೆ ನಿಗಾ ವಹಿಸಲು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಇದರೊಂದಿಗೆ ಮಳೆಯಿಂದಾಗಿ ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಸರ್ಕಾರದಿಂದ ಪರಿಹಾರ: ಮಳೆಯಿಂದ ಹಾನಿಯಾದ ಮನೆಗಳಿಗೆ ತಕ್ಷಣ 10 ಸಾವಿರ ರೂಪಾಯಿ ಪರಿಹಾರ ನೀಡುವಂತೆ ಸೂಚಿಸಲಾಗಿದೆ. ಕೆರೆಕಟ್ಟೆಗಳಿರುವ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಮಳೆ ಹಾನಿ ಪರಿಹಾರ ನೀಡಲು ಹಿಂದೆ ಮುಂದೆ ನೋಡಬಾರದು. ಬಿದ್ದಿರುವ ವಿದ್ಯುತ್​ ಕಂಬಗಳನ್ನ 24 ಗಂಟೆಗಳಲ್ಲಿ ದುರಸ್ತಿಗೊಳಿಸುವಂತೆ ಬೆಸ್ಕಾಂಗೆ ಸೂಚನೆ ನೀಡಲಾಗಿದೆ. ಜಲಾವೃತ ಪ್ರದೇಶಗಳಲ್ಲಿನ ಜನರಿಗೆ ಆಶ್ರಯ ನೀಡಲು ಸೂಚಿಸಲಾಗಿದ್ದು, ಎಲ್ಲ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 900 ಕೋಟಿ ರೂಪಾಯಿ ಇದೆ. ಬೆಳೆ ಸಮೀಕ್ಷೆ ಮಾಡಿ, ಪರಿಹಾರಕ್ಕೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com