ಲೈಂಗಿಕ ದೌರ್ಜನ್ಯ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ಮುರುಘಾ ಶ್ರೀ

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರು ಬಂಧನ ಭೀತಿ ಎದುರಿಸುತ್ತಿದ್ದು, ಸೋಮವಾರ ನಿರೀಕ್ಷಣಾ ಜಾಮೀನು ಕೋರಿ...
ಚಿತ್ರದುರ್ಗದ ಮುರುಘಾ ಶರಣರು
ಚಿತ್ರದುರ್ಗದ ಮುರುಘಾ ಶರಣರು

ಚಿತ್ರದುರ್ಗ: ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರು ಬಂಧನ ಭೀತಿ ಎದುರಿಸುತ್ತಿದ್ದು, ಸೋಮವಾರ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಮುರುಘಾ ಶ್ರೀಗಳ ಪರ ವಕೀಲರು ಇಂದು ನಿರೀಕ್ಷಣಾ ಜಾಮೀನು ಕೋರಿ ಚಿತ್ರದುರ್ಗದ ಎರಡನೇ ಸೆಷನ್ಸ್ ಕೋರ್ಟ್ ಅರ್ಜಿ ಸಲ್ಲಿಸಿದ್ದು, ಅರ್ಜಿ ಸ್ವೀಕರಿಸಿದ ಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 1ಕ್ಕೆ ನಿಗದಿಪಡಿಸಿದೆ.

ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಶ್ರೀಗಳನ್ನು ಯಾವುದೇ ಕ್ಷಣದಲ್ಲೂ ಬಂಧಿಸುವ ಸಾಧ್ಯತೆ ಇದೆ.

ಇನ್ನು ತಮ್ಮ ವಿರುದ್ಧದ ಆರೋಪಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಮುರುಘಾ ಶ್ರೀಗಳು, ನನ್ನ ವಿರುದ್ಧ ಪಿತೂರಿ ನಡೆದಿದೆ. ಇದೇನು ಹೊಸದಲ್ಲ, ಕಳೆದ 15 ವರ್ಷದಿಂದ ನಡೆಯುತ್ತಿದೆ. ನಮ್ಮ ಮಠ ನ್ಯಾಯ ದೇಗುಲದಂತಿತ್ತು. ಇದೀಗ ಮಠದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com