
ಸಿದ್ದರಾಮಯ್ಯ, ಡಿಕೆಶಿ ಮತ್ತಿತರರು
ಬೆಂಗಳೂರು: ರಾಜ್ಯ ಬಿಜೆಪಿ ನೀಡಿದ್ದ ಪ್ರಣಾಳಿಕೆಯ ಭರವಸೆಗಳಲ್ಲಿ ಶೇ. 10 ಕೂಡ ಈಡೇರಿಸಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಾವು 2013ರ ಚುನಾವಣೆ ವೇಳೆ ಜನರಿಗೆ 165 ಭರವಸೆಗಳನ್ನು ನೀಡಿ, ಅವುಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೆವು, ಜೊತೆಗೆ ಹೆಚ್ಚುವರಿ 30 ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೆವು. ಆದರೆ, ರಾಜ್ಯ ಬಿಜೆಪಿ ನೀಡಿದ್ದ ಉಳಿದ ಭರವಸೆಗಳ ಈಡೇರಿಕೆ ಯಾವಾಗ? ಎಂದು ಪ್ರಶ್ನಿಸಿದ್ದಾರೆ.
ಅಧಿಕಾರಕ್ಕೆ ಬಂದ ಕೂಡಲೇ ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ 1 ಲಕ್ಷದ ವರೆಗಿನ ರೈತರ ಸಾಲ ಮನ್ನಾ ಮಾಡುವ ಭರವಸೆಯನ್ನು ಬಿಜೆಪಿಯವರು ನೀಡಿದ್ದರು. ಹಿಂದೊಮ್ಮೆ ಸಾಲ ಮನ್ನಾ ಮಾಡಲು ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಲ್ಲ ಎಂದಿದ್ದ ಬಿಎಸ್ ಯಡಿಯೂರಪ್ಪ ವಚನ ಭ್ರಷ್ಟತೆಯಲ್ಲಿ ನಿಸ್ಸೀಮರು ಎಂದು ಟೀಕಿಸಿದ್ದಾರೆ.
ಅಧಿಕಾರಕ್ಕೆ ಬಂದ ಕೂಡಲೇ ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ 1 ಲಕ್ಷದ ವರೆಗಿನ ರೈತರ ಸಾಲ ಮನ್ನಾ ಮಾಡುವ ಭರವಸೆಯನ್ನು @BJP4Karnataka ಅವರು ನೀಡಿದ್ದರು. ಹಿಂದೊಮ್ಮೆ ಸಾಲ ಮನ್ನಾ ಮಾಡಲು ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಲ್ಲ ಎಂದಿದ್ದ @BSYBJP ವಚನ ಭ್ರಷ್ಟತೆಯಲ್ಲಿ ನಿಸ್ಸೀಮರು. 4/15#ವಚನವಂಚನೆ
— Siddaramaiah (@siddaramaiah) August 29, 2022
ರಾಜ್ಯದಲ್ಲಿ ಬಾಕಿ ಇರುವ ಎಲ್ಲಾ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು 1.5 ಲಕ್ಷ ಕೋಟಿ ಖರ್ಚು ಮಾಡುತ್ತೇವೆ ಎಂದು ಅವರು ವಚನ ನೀಡಿದ್ದರು. ಕಳೆದ ಮೂರು ವರ್ಷಗಳಲ್ಲಿ ಕೇವಲ 48 ಸಾವಿರ ಕೋಟಿ ಖರ್ಚು ಮಾಡಿದ್ದಾರೆ. ಉಳಿದ ಒಂದು ಲಕ್ಷ ಕೋಟಿ ರೂಪಾಯಿಯ ಯೋಜನೆಗಳು ಜಾರಿಯಾಗೋದು ಯಾವಾಗ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಭ್ರಷ್ಟಾಚಾರದಲ್ಲಿ ಕರ್ನಾಟಕ ಇಂದು ದೇಶಕ್ಕೇ ರಾಜಧಾನಿ, ನಮ್ಮ ಪ್ರಶ್ನೆಗೆ ಉತ್ತರಿಸುವಿರಾ: ಡಿಕೆ ಶಿವಕುಮಾರ್
ಅಧಿಕಾರಕ್ಕೆ ಬಂದ ಮೇಲೆ ರಾಜ್ಯದ ಸಾಲ 5 ಲಕ್ಷದ 40 ಸಾವಿರ ಕೋಟಿಗೆ ಏರಿದೆ. ಕೇವಲ 4 ವರ್ಷಗಳಲ್ಲಿ 3 ಲಕ್ಷ ಕೋಟಿ ಸಾಲ ಮಾಡಿದ್ದು ಬಿಜೆಪಿ ಸಾಧನೆ ಅಲ್ಲವೇ ಎಂದಿದ್ದಾರೆ.