ಅಮೃತ ಕ್ರೀಡಾ ಯೋಜನೆಯಡಿ ಕ್ರೀಡಾಪಟುಗಳಿಗೆ ಅಂತರರಾಷ್ಟ್ರೀಯ ತರಬೇತಿ: ಬಸವರಾಜ ಬೊಮ್ಮಾಯಿ

ಅಮೃತ ಕ್ರೀಡಾ ಯೋಜನೆಯಡಿ 75 ಕ್ರೀಡಾ ಪಟುಗಳಿಗೆ ನಾಲ್ಕು ವರ್ಷಗಳ ಕಠಿಣ ತರಬೇತಿ ನೀಡುತ್ತಿರುವ ಕರ್ನಾಟಕ ಸರ್ಕಾರ, ಇದೀಗ ಅವರನ್ನು ಒಲಿಂಪಿಕ್ಸ್ ಮತ್ತು ಇತರ ಅಂತರರಾಷ್ಟ್ರೀಯ ಕ್ರೀಡಾಕೂಟಗಳಿಗೆ ಸಿದ್ಧಗೊಳಿಸಲು ಅಂತರರಾಷ್ಟ್ರೀಯ ತರಬೇತುದಾರರನ್ನು ನೀಡಲಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಅಮೃತ ಕ್ರೀಡಾ ಯೋಜನೆಯಡಿ 75 ಕ್ರೀಡಾ ಪಟುಗಳಿಗೆ ನಾಲ್ಕು ವರ್ಷಗಳ ಕಠಿಣ ತರಬೇತಿ ನೀಡುತ್ತಿರುವ ಕರ್ನಾಟಕ ಸರ್ಕಾರ, ಇದೀಗ ಅವರನ್ನು ಒಲಿಂಪಿಕ್ಸ್ ಮತ್ತು ಇತರ ಅಂತರರಾಷ್ಟ್ರೀಯ ಕ್ರೀಡಾಕೂಟಗಳಿಗೆ ಸಿದ್ಧಗೊಳಿಸಲು ಅಂತರರಾಷ್ಟ್ರೀಯ ತರಬೇತುದಾರರನ್ನು ನೀಡಲಿದೆ.

'ಅಗತ್ಯವಿದ್ದರೆ, ನಾವು ನಮ್ಮ ಕ್ರೀಡಾಪಟುಗಳನ್ನು ಭಾರತದಿಂದ ಹೊರಗೆ ಕಳುಹಿಸುತ್ತೇವೆ ಅಥವಾ ಕರ್ನಾಟಕಕ್ಕೆ ತರಬೇತುದಾರರನ್ನು ಕರೆತರುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಕ್ರೀಡಾ ದಿನದ ಕಾರ್ಯಕ್ರಮದಲ್ಲಿ ಹೇಳಿದರು.

ಕ್ರೀಡಾಪಟುಗಳಲ್ಲಿನ ಪ್ರತಿಭೆಯನ್ನು ಹೊರತೆಗೆದು ಅವರಿಗೆ ಪ್ರಶಸ್ತಿ ಮತ್ತು ತರಬೇತಿ ನೀಡುವುದು ರಾಜ್ಯ ಸರ್ಕಾರದ ಉದ್ದೇಶವಾಗಿದೆ. ಮುಂದಿನ ನಾಲ್ಕು ವರ್ಷಗಳಲ್ಲಿ ಒಲಿಂಪಿಕ್ಸ್ ಮತ್ತು ಅಂತರರಾಷ್ಟ್ರೀಯ ಕ್ರೀಡಾಕೂಟಗಳನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ಸರ್ಕಾರವೇ ತರಬೇತಿ ಕೊಡಿಸಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗಣ್ಯ ಕ್ರೀಡಾಪಟುಗಳಿಗೆ ಏಕಲವ್ಯ ಮತ್ತು ಕ್ರೀಡಾ ರತ್ನ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

ವರ್ಷವಿಡೀ ಕ್ರೀಡಾಕೂಟ ಹಮ್ಮಿಕೊಳ್ಳುವ ಯೋಜನೆ ಇದೆ ಎಂದ ಅವರು, ತರಬೇತಿ ಪಡೆಯುವ ಅವರಲ್ಲಿ ಕೆಲವರು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿ ಪದಕಗಳನ್ನು ಗೆಲ್ಲಬೇಕೆಂಬುದು ನಮ್ಮ ಬಯಕೆ. 'ಈ ಸ್ಪರ್ಧೆಗಳನ್ನು ವ್ಯವಸ್ಥಿತವಾಗಿ ಆಯೋಜಿಸುವುದು ನಮ್ಮ ಉದ್ದೇಶವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಗ್ರಾಮೀಣ ಕ್ರೀಡೆಗಳಲ್ಲಿ ಆಸಕ್ತಿ ತೋರಿದ್ದಾರೆ. ಕರ್ನಾಟಕದಲ್ಲಿ ಈ ಕಾರ್ಯಕ್ರಮವನ್ನು ಆರಂಭದಲ್ಲಿ ಪಂಚಾಯತ್ ಮಟ್ಟದಲ್ಲಿ ನಡೆಸಲಾಗುವುದು. ನಂತರ ತಾಲೂಕು, ಜಿಲ್ಲೆ ಮತ್ತು ಅಂತಿಮವಾಗಿ ರಾಜ್ಯ ಮಟ್ಟದಲ್ಲಿ ನಡೆಸಲಾಗುತ್ತದೆ' ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com