ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 589 ಸೇರಿ ರಾಜ್ಯದಲ್ಲಿ 845 ಮಂದಿಗೆ ಪಾಸಿಟಿವ್; 5 ಸಾವು

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 845 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,50,915ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 845 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,50,915ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಐವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40199ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 589 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1864249ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 1389 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4003899ಕ್ಕೆ ಏರಿಕೆಯಾಗಿದೆ. ಇನ್ನು 6775 ಸಕ್ರಿಯ ಪ್ರಕರಣಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com