ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಅದ್ದೂರಿ ಗಣೇಶೋತ್ಸವ; ಇದೇ ಮೊದಲ ಬಾರಿಗೆ ಐತಿಹಾಸಿಕ ಆಚರಣೆ

ಹುಬ್ಬಳ್ಳಿ-ಧಾರವಾಡದ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿಗೆ ಅವಕಾಶ ನೀಡುವ ಅಧಿಕಾರಿಗಳ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿಗೆ ಅವಕಾಶ ನೀಡುವ ಅಧಿಕಾರಿಗಳ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.

ಈದ್ಗಾ ಮೈದಾನದಲ್ಲಿ ಧಾರ್ಮಿಕ ಕ್ರಿಯೆಗಳಿಗೆ ಅನುಮತಿಯನ್ನು ಪ್ರಶ್ನಿಸಿ ಅಂಜುಮಾನ್ ಮುಸ್ಲಿಂ ಕಮಿಟಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ತಿರಸ್ಕರಿಸಿದ್ದು, ಗಣೇಶೋತ್ವವ ಆಚರಣೆಗೆ ಅನುಮತಿ ನೀಡಿದೆ.

ಈದ್ಗಾ ಮೈದಾನಕ್ಕೆ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಗಮಿಸಿ, ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ಶ್ರೀರಾಮ ಸೇನೆಯ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.

ಧಾರವಾಡದಲ್ಲಿ ಪರಿಸ್ಥಿತಿ ಸಂಪೂರ್ಣ ಶಾಂತಿಯುತವಾಗಿದ್ದು, ಗಣೇಶ ಹಬ್ಬಕ್ಕೆ ವಿಸ್ತೃತ ವ್ಯವಸ್ಥೆ ಮಾಡಲಾಗಿದೆ. ನಾವು ಇತರ ಭದ್ರತಾ ಸಿಬ್ಬಂದಿಯೊಂದಿಗೆ 1 ಕ್ಷಿಪ್ರ ಕಾರ್ಯಪಡೆಯನ್ನು ನಿಯೋಜಿಸಿದ್ದೇವೆ. ಎಂದು ಲಾಭು ರಾಮ್, ಸಿಪಿ ಹುಬ್ಬಳ್ಳಿ-ಧಾರವಾಡದ ನಗರ ಪೊಲೀಸ್ ಆಯುಕ್ತ ಲಾಬು ರಾಮ್ ತಿಳಿಸಿದ್ದಾರೆ.

ಇದೇ ಮೊದಲ ಬಾರಿಗೆ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸುತ್ತಿದ್ದು, 1,500 ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.

ಶಾಶ್ವತ ಕಟ್ಟಡ ಕಟ್ಟುವಂತಿಲ್ಲ, 30*30 ಅಡಿಯ ಪೆಂಡಾಲ್ ಮಾತ್ರ ಹಾಕಬೇಕು, ಗಣೇಶೋತ್ಸವದಲ್ಲಿ ಎಲ್ಲರೂ ಭಾಗವಹಿಸಬಹುದು ಎಂದು ಹೈಕೋರ್ಟ್ ಷರತ್ತುಬದ್ಧ ಮೂರು ದಿನಗಳ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿದೆ.

ಗಣೇಶೋತ್ಸವಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಹಾಗೂ ಅನ್ಯ ಉದ್ದೇಶಕ್ಕೆ ನೀಡಬಾರದು ಎಂಬ ಅಂಜುಮಾನ್ ಸಂಸ್ಥೆಯ ಕೋರಿಕೆಗೆ ಮಧ್ಯಂತರ ಆದೇಶ ನೀಡಲು ಹೈಕೋರ್ಟ್ ನಿರಾಕರಿಸಿದೆ. ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ನಡೆಸುವ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ತೀರ್ಮಾನದ ವಿರುದ್ಧ ಅಂಜುಮಾನ್ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿತ್ತು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ ಎಸ್. ಕಿಣಗಿ ಅವರು ಬೆಂಗಳೂರಿನ ಈದ್ಗಾ ಮೈದಾನ ವಿವಾದ ಕುರಿತ ಸುಪ್ರೀಂ ಕೋರ್ಟ್ ತೀರ್ಪು ಬಂದ ನಂತರ ಇಲ್ಲಿನ ಅರ್ಜಿಯ ವಿಚಾರಣೆ ನಡೆಸುವುದಾಗಿ ತಿಳಿಸಿದ್ದರು.

ಸುಪ್ರೀಂ ಕೋರ್ಟ್‌ ತೀರ್ಪಿನ ಪ್ರತಿ ಕೈಸೇರಿದ ನಂತರ, ಮಂಗಳವಾರ ರಾತ್ರಿ 10ಕ್ಕೆ ವಿಚಾರಣೆ ಆರಂಭಗೊಂಡಿತು. ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿಗಳು, ಈ ಕುರಿತಂತೆ ಯಾವುದೇ ಮಧ್ಯಂತರ ಆದೇಶ ನೀಡಲು ನಿರಾಕರಿಸಿದರು. ಪ್ರಕರಣದ ವಿಚಾರಣೆಯನ್ನು ನಾಲ್ಕು ವಾರ ಮುಂದೂಡಿದರು. ಹೀಗಾಗಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com