ನರೇಂದ್ರ ಮೋದಿ ಅವರೇ, ಬೆಂಗಳೂರು ಉಳಿಸಿ- ಉದ್ಯಮಿ ಮೋಹನ್ ದಾಸ್ ಪೈ

ಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರಿನಲ್ಲಿ ಅಸಮರ್ಪಕ ಆಡಳಿತ ನಿರ್ವಹಣೆ ಕುರಿತು ಉದ್ಯಮಿ ಮೋಹನ್ ದಾಸ್ ಪೈ ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಸೆಳೆದಿದ್ದಾರೆ.
ಪ್ರಧಾನಿ ಮೋದಿ, ಮೋಹನ್ ದಾಸ್ ಪೈ
ಪ್ರಧಾನಿ ಮೋದಿ, ಮೋಹನ್ ದಾಸ್ ಪೈ
Updated on

ಬೆಂಗಳೂರು: ಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರಿನಲ್ಲಿ ಅಸಮರ್ಪಕ ಆಡಳಿತ ನಿರ್ವಹಣೆ ಕುರಿತು ಉದ್ಯಮಿ ಮೋಹನ್ ದಾಸ್ ಪೈ ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಸೆಳೆದಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಮೋಹನ್ ದಾಸ್ ಪೈ, ರಾಜ ಕಾಲುವೆಗಳು ಹೂಳಿನಿಂದ ತುಂಬಿವೆ. ಎಲ್ಲಾ ಕಡೆ ಕಸ, ಅವಶೇಷಗಳು ಬಿದ್ದಿದೆ. ಮುಖ್ಯವಾದ ಯೋಜನೆಗಳನ್ನು ಪರಿಶೀಲಿಸಿ ಬೆಂಗಳೂರು ಉಳಿಸಿ ಎಂದು ಪ್ರಧಾನಿಗೆ ಮನವಿ ಮಾಡಿದ್ದಾರೆ.

ಸ್ಥಳೀಯ ಸರ್ಕಾರ ಸಮಸ್ಯೆ ಬಗೆಹರಿಸುವಲ್ಲಿ ವಿಫಲವಾದಾಗ ಪ್ರಧಾನಿ ನರೇಂದ್ರ ಮೋದಿ ಕೊನೆಯ ಭರವಸೆ. ಏಕೆಂದರೆ ಆಡಳಿತ ಸುಧಾರಿಸಬೇಕಾಗಿದೆ, ನಮ್ಮ ನಗರಕ್ಕೆ ಉತ್ತಮ ಕಾನೂನುಗಳು, ಉತ್ತಮ ಹೊಣೆಗಾರಿಕೆಯ ಅಗತ್ಯವಿದೆ ಎಂದಿದ್ದಾರೆ.

ದೆಹಲಿಯನ್ನು ಭ್ರಷ್ಟಾಚಾರ ಮುಕ್ತ ಮಾಡುವುದಾದರೇ ಬೆಂಗಳೂರನ್ನು ಯಾಕೆ ಮಾಡುತ್ತಿಲ್ಲ  ಎಂದು ಪ್ರಶ್ನಿಸಿದ್ದು, ತಮ್ಮ ಟ್ವೀಟ್ ನ್ನು ಪ್ರಧಾನಿ ಮೋದಿ, ಅಮಿತ್ ಶಾ, ಬಿಎಸ್ ಸಂತೋಷ್ ಹಾಗೂ ಮುಖ್ಯಮಂತ್ರಿ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com