ಸಿಲಿಕಾನ್ ಸಿಟಿಯಲ್ಲಿ ಚಿರತೆ ಪ್ರತ್ಯಕ್ಷ: ಜನರಲ್ಲಿ ಹೆಚ್ಚಿದ ಆತಂಕ!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ತುರಹಳ್ಳಿ ಅರಣ್ಯ ಪ್ರದೇಶ ಮತ್ತು ದೇವನಹಳ್ಳಿ ಸುತ್ತಮುತ್ತ ಚಿರತೆ ಪ್ರತ್ಯಕ್ಷವಾಗಿರುವುದು ಜನರಲ್ಲಿ ಭೀತಿಯನ್ನು ಮೂಡಿಸಿದೆ.
Published: 01st December 2022 06:40 PM | Last Updated: 01st December 2022 06:44 PM | A+A A-

ಸಿಸಿಟಿವಿಯಲ್ಲಿ ಪತ್ತೆಯಾದ ಚಿರತೆ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ತುರಹಳ್ಳಿ ಅರಣ್ಯ ಪ್ರದೇಶ ಮತ್ತು ದೇವನಹಳ್ಳಿ ಸುತ್ತಮುತ್ತ ಚಿರತೆ ಪ್ರತ್ಯಕ್ಷವಾಗಿರುವುದು ಜನರಲ್ಲಿ ಭೀತಿಯನ್ನು ಮೂಡಿಸಿದೆ.
ನಾಲ್ಕು ಚಿರತೆಗಳು ಓಡಾಡುತ್ತಿರುವುದು ಸಿಸಿಟಿವಿಗಳಲ್ಲಿ ಪತ್ತೆಯಾಗಿದೆ ಎಂದು ಸ್ಥಳೀಯ ನಿವಾಸಿಗಳು ಹೇಳುತ್ತಿದ್ದಾರೆ. ತುರಹಳ್ಳಿ ಅರಣ್ಯ ಪ್ರದೇಶದಲ್ಲಿ ಬೋನ್ ಇಡುವ ಮೂಲಕ ಚಿರತೆ ಸೆರೆಗೆ ಅರಣ್ಯ ಅಧಿಕಾರಿಗಳು ಮುಂದಾಗಿದ್ದಾರೆ.
ಬೋನ್ನಲ್ಲಿ ನಾಯಿಮರಿ ಕಟ್ಟಿಹಾಕಿ ಚಿರತೆ ಸೆರೆಗೆ ಪ್ರಯತ್ನಿಸಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಖಾಸಗಿ ಕಾರ್ಖಾನೆ ಬಳಿ ಕೂಡ ಎರಡು ದಿನದಿಂದ ಚಿರತೆ ಓಡಾಟ ನಡೆಸಿರುವುದು ಪತ್ತೆಯಾಗಿದೆ. ಈ ಪ್ರದೇಶಗಳ ನಿವಾಸಿಗಳು ಎಚ್ಚರಿಕೆಯಿಂದ ಓಡಾಡುವಂತೆ ಅರಣ್ಯ ಇಲಾಖೆ ತಿಳಿಸಿದೆ.