ಕನಕಪುರ: ರುದ್ರಾಕ್ಷಿ ಹೂವುಗಳು, ತೊಗರಿ ಗಿಡಗಳ ಮಧ್ಯೆ ಗಾಂಜಾ ಬೆಳೆದಿದ್ದ ವ್ಯಕ್ತಿ ಬಂಧನ

52 ವರ್ಷದ ವ್ಯಕ್ತಿಯೊಬ್ಬರು ವೈಯಕ್ತಿಕ ಬಳಕೆಗಾಗಿ ತಮ್ಮ ಜಮೀನಿನಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದಕ್ಕಾಗಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪೊಲೀಸರು ಆತನ ಜಮೀನಿನ ಮೇಲೆ ದಾಳಿ ನಡೆಸಿ ನಾಲ್ಕು ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: 52 ವರ್ಷದ ವ್ಯಕ್ತಿಯೊಬ್ಬರು ವೈಯಕ್ತಿಕ ಬಳಕೆಗಾಗಿ ತಮ್ಮ ಜಮೀನಿನಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದಕ್ಕಾಗಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪೊಲೀಸರು ಆತನ ಜಮೀನಿನ ಮೇಲೆ ದಾಳಿ ನಡೆಸಿ ನಾಲ್ಕು ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ.

ಸೋಮವಾರ ಮಧ್ಯಾಹ್ನ ಕನಕಪುರ ಸಮೀಪದ ಹೊಸದೊಡ್ಡಿಯ ಜಮೀನಿನಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದಕ್ಕಾಗಿ ಕೋಡಿಹಳ್ಳಿ ನಿವಾಸಿ ಸಿ. ರಾಮದಾಸ ಅವರನ್ನು ಬಂಧಿಸಲಾಗಿದೆ. ರುದ್ರಾಕ್ಷಿ ಹೂವುಗಳ ಗಿಡಗಳ ಮಧ್ಯೆ ಗಾಂಜಾ ಗಿಡಗಳನ್ನು ಬೆಳೆಸಿದ್ದ ಅವರು, ಅವುಗಳನ್ನು ಮರೆಮಾಚಲು ತೊಗರಿ ಗಿಡಗಳನ್ನು ಬೆಳೆಸಿದ್ದರು.

ರಾಮದಾಸ ಅವರ ಬಗ್ಗೆ ಸಿಕ್ಕ ನಿಖರ ಮಾಹಿತಿ ಆಧರಿಸಿ ಅವರ ಜಮೀನಿನ ಮೇಲೆ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಶಪಡಿಸಿಕೊಂಡಿರುವ ಗಾಂಜಾ ಗಿಡಗಳ ಬೆಲೆ ಸುಮಾರು 15,000 ರೂ. ಆಗಿದ್ದು, ಆರೋಪಿಗಳು ಮಾದಕ ವಸ್ತು ಕಳ್ಳ ಸಾಗಣೆ ದಂಧೆಯಲ್ಲಿ ತೊಡಗಿದ್ದಾರೆಯೇ ಎಂಬ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ. ಪೊಲೀಸರು ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com