ಮುಸ್ಲಿಂ ಮಹಿಳಾ ಕಾಲೇಜು ಸ್ಥಾಪಿಸಬೇಕೆಂಬ ಮನವಿಗೆ ಸಚಿವೆ ಶಶಿಕಲಾ ಜೊಲ್ಲೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ವಕ್ಫ್ ಬೋರ್ಡ್ ಅಧ್ಯಕ್ಷ ಶಾ ಸಅದಿ

ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆ ಬಗ್ಗೆ ಬಿಜೆಪಿ ಸರ್ಕಾರ ನಿರ್ಧರಿಸಿದ್ದು ಮುಂದಿನ ತಿಂಗಳು ಮುಖ್ಯಮಂತ್ರಿಗಳು ಶಂಕುಸ್ಥಾಪನೆ ನೆರವೇರಿಸುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದ ಕೂಡಲೇ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುತ್ತಿದೆಯೇ ಎಂಬ ಸಂದೇಹ ವ್ಯಕ್ತವಾಗುತ್ತಿದೆ. 
ವಕ್ಫ್ ಬೋರ್ಡ್ ಅಧ್ಯಕ್ಷ ಶಾ ಸಅದಿ
ವಕ್ಫ್ ಬೋರ್ಡ್ ಅಧ್ಯಕ್ಷ ಶಾ ಸಅದಿ

ಬೆಂಗಳೂರು: ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆ ಬಗ್ಗೆ ಬಿಜೆಪಿ ಸರ್ಕಾರ ನಿರ್ಧರಿಸಿದ್ದು ಮುಂದಿನ ತಿಂಗಳು ಮುಖ್ಯಮಂತ್ರಿಗಳು ಶಂಕುಸ್ಥಾಪನೆ ನೆರವೇರಿಸುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದ ಕೂಡಲೇ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುತ್ತಿದೆಯೇ ಎಂಬ ಸಂದೇಹ ವ್ಯಕ್ತವಾಗುತ್ತಿದೆ. 

ಈ ಬಗ್ಗೆ ಇಂದು ಮಾಧ್ಯಮದವರು ಪ್ರಶ್ನಿಸಿದಾಗ, ಸರ್ಕಾರದ ಮಟ್ಟದಲ್ಲಿ ಇದು ಚರ್ಚೆಯೇ ಆಗಿಲ್ಲ, ಸರ್ಕಾರದ ನಿಲುವು ಅದಲ್ಲ, ಅದು ವಕ್ಫ್ ಬೋರ್ಡ್ ಅಧ್ಯಕ್ಷರ ಹೇಳಿಕೆಯಷ್ಟೇ ಎಂದು ಹೇಳಿದ್ದರು.

ಈ ಬಗ್ಗೆ ವಕ್ಫ್  ಬೋರ್ಡ್ ಅಧ್ಯಕ್ಷ ಸಅದಿ ಅವರನ್ನು ಇಂದು ಮಾಧ್ಯಮ ಪ್ರತಿನಿಧಿಗಳು ಮಾತನಾಡಿಸಿದಾಗ, ಧಾರ್ಮಿಕ ದತ್ತಿ ಖಾತೆ ಇಲಾಖೆ ಶಶಿಕಲಾ ಜೊಲ್ಲೆಯವರ ಬಳಿ ಹೋಗಿ ಮಾತನಾಡಿ ಪ್ರಸ್ತಾವನೆ ಸಲ್ಲಿಸಿದ್ದು ಅದಕ್ಕೆ ಒಪ್ಪಿದ್ದಾರೆ. ವಕ್ಫ್ ಬೋರ್ಡ್ ನಲ್ಲಿರುವ 25 ಕೋಟಿ ರೂಪಾಯಿ ಹಣವನ್ನು ಬಳಸಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ 10 ಮುಸ್ಲಿಂ ಮಹಿಳಾ ಕಾಲೇಜುಗಳನ್ನು ಸ್ಥಾಪಿಸಬೇಕೆಂದು ನಾವು ಪ್ರಸ್ತಾವನೆ ಸಲ್ಲಿಸಿದ್ದು ಅದಕ್ಕೆ ಸಚಿವೆ ಶಶಿಕಲಾ ಜೊಲ್ಲೆಯವರು ಒಪ್ಪಿದ್ದರು. ಈ ಸಂಬಂಧ ಕೇಂದ್ರ ಸಚಿವೆ ಸ್ಮೃತಿ ಇರಾನಿಯವರನ್ನು ಭೇಟಿ ಮಾಡಿದ್ದು ಅವರು ಕೂಡ ಒಪ್ಪಿಗೆ ಸೂಚಿಸಿದ್ದಾರೆ. ಮುಸ್ಲಿಂ ಮಹಿಳೆಯರು ಶಿಕ್ಷಣದಲ್ಲಿ ಮುಂದುವರಿಯಬೇಕು ಎಂದು, ಅವರ ಶಿಕ್ಷಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹುಮ್ಮಸ್ಸು ಹೊಂದಿದೆ ಎಂದರು.

ವಕ್ಫ್ ಬೋರ್ಡ್ ನಲ್ಲಿರುವ 25 ಕೋಟಿ ರೂಪಾಯಿ ಬಳಸಿಕೊಂಡು ತಲಾ ಒಂದು ಕಾಲೇಜಿಗೆ 2.5 ಕೋಟಿಯಂತೆ ಬಳಸಿಕೊಳ್ಳೋಣ, ಸಿಎಂ ಕಡೆಯಿಂದಲೇ ಕಾಲೇಜು ಸ್ಥಾಪನೆಗೆ ಗ್ರೀನ್ ಸಿಗ್ನಲ್ ಕೊಡಿಸೋಣ ಎಂದು ಸಚಿವೆ ಶಶಿಕಲಾ ಜೊಲ್ಲೆಯವರು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದರು ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಾ ಶಅದಿ ಸ್ಪಷ್ಟಪಡಿಸಿದರು.

ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರ ಮುಸ್ಲಿಂ ಹೆಣ್ಣು ಮಕ್ಕಳಿಗಾಗಿಯೇ 10 ಹೊಸ ಕಾಲೇಜುಗಳನ್ನು ನಿರ್ಮಿಸುವ ನಿರ್ಧಾರಕ್ಕೆ ಕರ್ನಾಟಕದಲ್ಲಿ ವಿವಾದ ಭುಗಿಲೆದ್ದಿದ್ದು, ವ್ಯಾಪಕ ಪ್ರತಿಭಟನೆಯ ಎಚ್ಚರಿಕೆಯನ್ನು ಹಿಂದೂ ಸಂಘಟನೆಗಳು ನೀಡಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com