ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಮಧ್ಯೆ ಇಂದು ಬೆಳಗಾವಿಗೆ ತೆರಳಿದ ಸಿಎಂ ಬೊಮ್ಮಾಯಿ: ಹಲವು ಕಾಮಗಾರಿಗಳಿಗೆ ಚಾಲನೆ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಜೋರಾಗಿರುವ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಶುಕ್ರವಾರ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಈಗಾಗಲೇ ಅವರು ಬೆಂಗಳೂರಿನ ಹೆಚ್ ಎಎಲ್ ಏರ್ ಪೋರ್ಟ್ ನಿಂದ ಬೆಳಗಾವಿಗೆ ತೆರಳಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಜೋರಾಗಿರುವ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಶುಕ್ರವಾರ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಈಗಾಗಲೇ ಅವರು ಬೆಂಗಳೂರಿನ ಹೆಚ್ ಎಎಲ್ ಏರ್ ಪೋರ್ಟ್ ನಿಂದ ಬೆಳಗಾವಿಗೆ ತೆರಳಿದ್ದಾರೆ.

ಬೆಳಗಾವಿಯಲ್ಲಿ ಇಂದು ಸಿಎಂ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಬೆಳಗಾವಿಯಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನಾ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಇಂದು ಬೆಳಗ್ಗೆ 10.30ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣ ತಲುಪುವ ಸಿಎಂ 10.40ಕ್ಕೆ ರಸ್ತೆ ಮಾರ್ಗ ಮೂಲಕ 11.40ಕ್ಕೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ದೊಡಮಂಗಡಿ ತಲುಪಲಿದ್ದಾರೆ. ಬಸವೇಶ್ವರ ವೃತ್ತದಲ್ಲಿ ನಿರ್ಮಿಸಿರುವ ಬಸವೇಶ್ವರ ಕಂಚಳಿ ಪುತ್ಥಳಿ ಅನಾವರಣ ಮಾಡಲಿದ್ದಾರೆ.

ನಂತರ ರಾಮದುರ್ಗದಲ್ಲಿ ಕೆಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಸಂಜೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಬೆಳಗಾವಿಯಲ್ಲಿ ಗಡಿ ವಿವಾದ ಜೋರಾಗಿದೆ. ಮಹಾರಾಷ್ಟ್ರ ಸರ್ಕಾರದ ಆಡಳಿತ ಪಕ್ಷದ ನಾಯಕರು ವಿವಾದಾತ್ಮಕ ಹೇಳಿಕೆ ನೀಡಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಮರಾಠಿ ಭಾಷಿಕರು ಹೆಚ್ಚಿರುವ ಬೆಳಗಾವಿ, ನಿಪ್ಪಾಣಿ, ಕಾರವಾರ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರಬೇಕೆಂದು ಅಲ್ಲಿನ ನಾಯಕರು ಹೇಳುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಮಹಾರಾಷ್ಟ್ರದ ಜತ್ತ ಗ್ರಾಮ ಕರ್ನಾಟಕಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ಸಿಎಂ ಬೊಮ್ಮಾಯಿ ಇತ್ತೀಚೆಗೆ ಹೇಳಿದ್ದು ವಿವಾದದ ಕಿಚ್ಚು ಹೆಚ್ಚಾಗಿದೆ. 

ಗಡಿ ವಿವಾದಕ್ಕೆ ಇಂದು ಸಿಎಂ ಬೊಮ್ಮಾಯಿ ಭೇಟಿ ನೀಡಿ ಪರಿಹಾರ ಕಂಡುಹಿಡಿಯುತ್ತಾರೆಯೇ ಎಂಬುದು ಕುತೂಹಲವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com