ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವೈದ್ಯಕೀಯ ತಪಾಸಣೆಗೆ ಆಸ್ಪತ್ರೆಗೆ ದಾಖಲು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ  ಶಸ್ತ್ರ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಹೆಚ್ ಎಎಲ್ ಏರ್ ಪೋರ್ಟ್ ರಸ್ತೆಯಲ್ಲಿರುವ  ಮಣಿಪಾಲ್ ಆಸ್ಪತ್ರೆಯಲ್ಲಿ  ಇಂದು ಬೆಳಗ್ಗೆ ದಾಖಲಾಗಿದ್ದಾರೆ. 

ಇಂದು ಬೆಳಗ್ಗೆ ಸುಸ್ತು, ಆಯಾಸ ಎಂದು ಆಸ್ಪತ್ರೆಗೆ ಬಂದ ಸಿದ್ದರಾಮಯ್ಯನವರು ಹೊರರೋಗಿಯಾಗಿ ಆಸ್ಪತ್ರೆಗೆ ಬಂದಿದ್ದು ವೈದ್ಯರು ಸಂಪೂರ್ಣ ತಪಾಸಣೆ ನಡೆಸಲು ದಾಖಲಿಸಿಕೊಂಡಿದ್ದಾರೆ. ಇಂದು ಸಂಜೆ ಆಸ್ಪತ್ರೆಯಿಂದ ಅವರು ಬಿಡುಗಡೆಯಾಗುವ ನಿರೀಕ್ಷೆಯಿದೆ. ಇನ್ನು ನಾಲ್ಕೈದು ದಿನಗಳ ಕಾಲ ವೈದ್ಯರು ಸಿದ್ದರಾಮಯ್ಯ ಅವರಿಗೆ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. 

ಸಿದ್ದರಾಮಯ್ಯನವರು ಇತ್ತೀಚೆಗೆ 75ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. 2023ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಪಕ್ಷಗಳು ಚುನಾವಣೆಗೆ ಸಜ್ಜಾಗುತ್ತಿವೆ. ನಾಯಕರ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಬಾರಿ ಸಿದ್ದರಾಮಯ್ಯನವರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಈ ಬಾರಿ ಅವರು ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಹೇಳಲಾಗುತ್ತಿದ್ದು, ಕೋಲಾರದಲ್ಲಿಯೇ, ವರುಣಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆಯೇ ಎಂಬುದು ಇನ್ನೂ ನಿರ್ಧಾರವಾಗಿಲ್ಲ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com