ಆನೇಕಲ್ ಪುರಸಭೆ ಸದಸ್ಯನಾಗಿ ರೌಡಿಶೀಟರ್ ಮಂಜುನಾಥ್ ನಾಮನಿರ್ದೇಶನ ಮಾಡಿದ ರಾಜ್ಯ ಸರ್ಕಾರ!
ರೌಡಿಶೀಟರ್ ಗಳ ರಾಜಕೀಯ ಪ್ರವೇಶ ಇದೀಗ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು ಇದರ ಮಧ್ಯೆ ರಾಜ್ಯ ಸರ್ಕಾರ ಆನೇಕಲ್ ಪುರಸಭೆ ಸದಸ್ಯನಾಗಿ ರೌಡಿಶೀಟರ್ ಮಂಜುನಾಥ್ ರನ್ನು ನಾಮನಿರ್ದೇಶನ ಮಾಡುವುದು ಅಚ್ಚರಿಗೆ ಕಾರಣವಾಗಿದೆ.
Published: 02nd December 2022 06:54 PM | Last Updated: 02nd December 2022 08:01 PM | A+A A-

ಮಂಜುನಾಥ್
ಬೆಂಗಳೂರು: ರೌಡಿಶೀಟರ್ ಗಳ ರಾಜಕೀಯ ಪ್ರವೇಶ ಇದೀಗ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು ಇದರ ಮಧ್ಯೆ ರಾಜ್ಯ ಸರ್ಕಾರ ಆನೇಕಲ್ ಪುರಸಭೆ ಸದಸ್ಯನಾಗಿ ರೌಡಿಶೀಟರ್ ಮಂಜುನಾಥ್ ರನ್ನು ನಾಮನಿರ್ದೇಶನ ಮಾಡುವುದು ಅಚ್ಚರಿಗೆ ಕಾರಣವಾಗಿದೆ.
ಮಂಜುನಾಥ್ ಅಲಿಯಾಸ್ ಉಪ್ಪಿ ವಿರುದ್ಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ನಖರಬಾಬು ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ಪಕ್ಷ ಸೇರ್ಪಡೆಗೂ ಮುನ್ನವೇ ಮಂಜುನಾಥ್ ಗೆ ಅಧಿಕಾರ ನೀಡಿರುವುದು ಮತ್ತೊಮ್ಮೆ ರಾಜಕೀಯ ವಲಯದಲ್ಲಿ ವಾಗ್ಯುದ್ಧಕ್ಕೆ ಕಾರಣವಾಗಲಿದೆ.
ಇದನ್ನೂ ಓದಿ: ದೋ ನಂಬರ್ ದಂಧೆ ಮಾಡುವವರೇ ಅದರ್ಶಪುರುಷರು: ಕ್ರಿಮಿನಲ್ಗಳನ್ನು ಸುಭಗರಂತೆ ಸಮರ್ಥಿಸುತ್ತಿರುವ ಬಿಜೆಪಿ!
ಬಿಜೆಪಿ ಸಂಸದರು, ಶಾಸಕರ ಜೊತೆ ಸೈಲೆಂಟ್ ಸುನೀಲ್ ವೇದಿಕೆ ಮೇಲೆ ಕಾಣಿಸಿಕೊಂಡ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಗ್ಯುದ್ದ ಪ್ರಾರಂಭವಾಗಿದೆ. ಇನ್ನು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಪರಸ್ಪರ ಕೆಸರೆರೆಚಾಟದಲ್ಲಿ ತೊಡಗಿದ್ದಾರೆ.
ಇದಕ್ಕೂ ಮುನ್ನ ಫೈಟರ್ ರವಿ ಬಿಜೆಪಿ ಸೇರಿ ಆಗಿತ್ತು. ಬೆತ್ತನಗೆರೆ ಶಂಕರ ಬಿಜೆಪಿ ನಾಯಕರ ಬೆನ್ನ ಹಿಂದೆ ಸುತ್ತುತ್ತಿದ್ದಾನೆ.