ಮೈಸೂರು: ಟಿ ನರಸೀಪುರದಲ್ಲಿ ಚಿರತೆ ದಾಳಿಗೆ ಮತ್ತೊಂದು ಬಲಿ; ಕಾಲೇಜು ವಿದ್ಯಾರ್ಥಿನಿ ಸಾವು

ಮೈಸೂರು ಜಿಲ್ಲೆಯ ಟಿ ನರಸೀಪುರದ ತಾಲೂಕಿನಲ್ಲಿ ತಿಂಗಳ ಹಿಂದೆಯಷ್ಟೇ ಚಿರತೆ ದಾಳಿಯಿಂದ ಎಂ.ಎಲ್.ಹುಂಡಿ ಗ್ರಾಮದ ಯುವಕನೊಬ್ಬ ಬಲಿಯಾದ ನೆನಪು ಮಾಸುವ ಮುನ್ನವೇ ಚಿರತೆ ಮತ್ತೊಂದು ಬಲಿಯನ್ನು ಪಡೆದಿದೆ.
ಚಿರತೆ ದಾಳಿಗೆ ಬಲಿಯಾದ ಯುವತಿ
ಚಿರತೆ ದಾಳಿಗೆ ಬಲಿಯಾದ ಯುವತಿ

ಮೈಸೂರು: ಮೈಸೂರು ಜಿಲ್ಲೆಯ ಟಿ ನರಸೀಪುರದ ತಾಲೂಕಿನಲ್ಲಿ ತಿಂಗಳ ಹಿಂದೆಯಷ್ಟೇ ಚಿರತೆ ದಾಳಿಯಿಂದ ಎಂ.ಎಲ್.ಹುಂಡಿ ಗ್ರಾಮದ ಯುವಕನೊಬ್ಬ ಬಲಿಯಾದ ನೆನಪು ಮಾಸುವ ಮುನ್ನವೇ ಚಿರತೆ ಮತ್ತೊಂದು ಬಲಿಯನ್ನು ಪಡೆದಿದೆ.

ತಾಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದ ರಮೇಶ್ ನಾಯಕ ಎಂಬುವರ ಪುತ್ರಿ ಪಟ್ಟಣದ ಸರ್ಕಾರಿ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಮೇಘನಾ (22) ಚಿರತೆ ದಾಳಿಗೆ ತುತ್ತಾಗಿದ್ದಾಳೆ.

ಯುವತಿ ಬಹಿರ್ದೆಸೆ ಹೋಗಿದ್ದ ಸಮಯದಲ್ಲಿ ಚಿರತೆ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ಯುವತಿಯನ್ನು ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟಿದ್ದಾಳೆ.

ಚಿರತೆ ದಾಳಿ ಸುದ್ದಿ ಕಾಳ್ಗಿಚ್ಚಿನಂತೆ ಹರಡುತ್ತಿದ್ದಂತೆ ಆಕ್ರೋಶಗೊಂಡ ಗ್ರಾಮಸ್ಥರು ತಾಲೂಕು ಜನರಲ್ ಆಸ್ಪತ್ರೆ ಎದುರು ಜಮಾಯಿಸಿ ಚಿರತೆ ಹಿಡಿಯಲು ವಿಫಲರಾದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.

ಅರಣ್ಯಾಧಿಕಾರಿಗಳು ಕಣ್ಗಾವಲು ಹೆಚ್ಚಿಸಿದ್ದರೂ ಚಿರತೆ ಚಲನವಲನ ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲ. ವಾರದ ಹಿಂದೆ ಚಿರತೆ ಕಾಣಿಸಿಕೊಂಡ ಕೆಬ್ಬೆಹುಂಡಿ ಹಾಗೂ ಅಕ್ಕಪಕ್ಕದ ಗ್ರಾಮಗಳ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.

“ನಮ್ಮ ಎಚ್ಚರಿಕೆಗೆ ಅವರು ಕಿವಿಗೊಟ್ಟಿದ್ದರೆ, ಯುವತಿಯನ್ನು ಉಳಿಸಬಹುದಿತ್ತು. ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಅಧಿಕಾರಿಗಳನ್ನು ಒತ್ತಾಯಿಸುತ್ತೇವೆ ಎಂದು ಗ್ರಾಮಸ್ಥ ರಮೇಶ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com