ಬೆಳಗಾವಿಯಲ್ಲಿ ಪರಿಸ್ಥಿತಿ ಪ್ರಕ್ಷುಬ್ಧ: ನಾಳೆ ನಿಗದಿಯಾಗಿದ್ದ ಮಹಾರಾಷ್ಟ್ರ ಸಚಿವರುಗಳು ಭೇಟಿ ಡಿ.6ಕ್ಕೆ ಮುಂದೂಡಿಕೆ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತೀವ್ರವಾದ ನಂತರ ಅನೇಕ ಅಹಿತಕರ ಘಟನೆಗಳು ಬೆಳಗಾವಿಯಲ್ಲಿ ನಡೆದಿವೆ. ಮೊನ್ನೆ ಬೆಳಗಾವಿಯ ಗೋಗಟೆ ಕಾಲೇಜಿನಲ್ಲಿ ಮೊನ್ನೆ ಸಾಂಸ್ಕೃತಿಕ ಕಾರ್ಯಕ್ರಮ ವೇಳೆ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ಸಹಪಾಠಿಗಳು ಥಳಿಸಿದ್ದರಿಂದ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿದೆ.
ಮಹಾರಾಷ್ಟ್ರ ಸಚಿವರುಗಳಾದ ಚಂದ್ರಕಾಂತ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ
ಮಹಾರಾಷ್ಟ್ರ ಸಚಿವರುಗಳಾದ ಚಂದ್ರಕಾಂತ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತೀವ್ರವಾದ ನಂತರ ಅನೇಕ ಅಹಿತಕರ ಘಟನೆಗಳು ಬೆಳಗಾವಿಯಲ್ಲಿ ನಡೆದಿವೆ. ಮೊನ್ನೆ ಬೆಳಗಾವಿಯ ಗೋಗಟೆ ಕಾಲೇಜಿನಲ್ಲಿ ಮೊನ್ನೆ ಸಾಂಸ್ಕೃತಿಕ ಕಾರ್ಯಕ್ರಮ ವೇಳೆ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ಸಹಪಾಠಿಗಳು ಥಳಿಸಿದ್ದರಿಂದ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿದೆ.

ನಿನ್ನೆ ಕನ್ನಡಪರ ಸಂಘಟನೆಗಳು ಬೆಳಗಾವಿಯಲ್ಲಿ ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಿದರು. ಟಯರ್ ಗಳಿಗೆ ಬೆಂಕಿ ಹಚ್ಚಿ ಸುಟ್ಟು ಮಹಾರಾಷ್ಟ್ರ ವಿರುದ್ಧ ಘೋಷಣೆ ಕೂಗಿದ್ದರು.ಸದ್ಯ ಅಲ್ಲಿ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ.

ಈ ಹಿನ್ನೆಲೆಯಲ್ಲಿ ನಾಳೆ ಅಂದರೆ ಡಿಸೆಂಬರ್ 3ರಂದು ಬೆಳಗಾವಿ ಭೇಟಿ ನಿಗದಿಪಡಿಸಿದ್ದ ಮಹಾರಾಷ್ಟ್ರ ಸಚಿವರುಗಳಾದ ಚಂದ್ರಕಾಂತ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ ಆಗಮನವನ್ನು ಮುಂದೂಡಿದ್ದಾರೆ.

ಬೆಳಗಾವಿ ಅಂಬೇಡ್ಕರ್ ಸಂಘಟನೆಯ ಮನವಿ ಮೇರೆಗೆ ತಮ್ಮ ಭೇಟಿಯನ್ನು ಮುಂದೂಡಿದ್ದು ಡಾ ಬಿ ಆರ್ ಅಂಬೇಡ್ಕರ್ ಅವರ ಪುಣ್ಯತಿಥಿ ದಿನ ಮಹಾಪರಿನಿರ್ವಾಣ ದಿನವಾದ ಡಿಸೆಂಬರ್ 6ಕ್ಕೆ ಬೆಳಗಾವಿಗೆ ಆಗಮಿಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com