ಬೆಂಗಳೂರು: ಪಾರಿವಾಳ ಹಿಡಿಯುವ ವೇಳೆ ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರಿಗೆ ಗಂಭೀರ ಗಾಯ
ಪಾರಿವಾಳ ಹಿಡಿಯುವ ವೇಳೆ ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Published: 02nd December 2022 02:07 PM | Last Updated: 02nd December 2022 02:17 PM | A+A A-

ಗಾಯಾಳು ಬಾಲಕರು
ಬೆಂಗಳೂರು: ಪಾರಿವಾಳ ಹಿಡಿಯುವ ವೇಳೆ ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ನಂದಿನಿ ಲೇಔಟ್ ವಿಜಯಾನಂದ ನಗರದಲ್ಲಿ ಗುರುವಾರ ಸಂಜೆ ಈ ಘಟನೆ ನಡೆದಿದ್ದು, ಪಾರಿವಾಳ ಹಿಡಿಯಲು ಯತ್ನಿಸುತ್ತಿದ್ದ ಇಬ್ಬರು ಬಾಲಕರಿಗೆ ಆಕಸ್ಮಿಕವಾಗಿ ಹೈಟೆನ್ಶನ್ ವಿದ್ಯುತ್ ವಯರ್(Electric shock) ತಾಗಿದ್ದರಿಂದ ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದಾರೆ.
ಗಾಯಾಳು ಬಾಲಕರು ಸುಪ್ರೀತ್(12) ಮತ್ತು ಚಂದ್ರು(10) ಎಂದು ತಿಳಿದುಬಂದಿದ್ದು, ಇಬ್ಬರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಪಾರಿವಾಳ ಹಿಡಿಯುವ ಹವ್ಯಾಸ ಹೊಂದಿರುವ ಇವರಿಬ್ಬರು ಗುರುವಾರ ಸಂಜೆ 6:30ರ ಸುಮಾರಿಗೆ ಪಾರಿವಾಳ ಹಿಡಿಯುವ ಯತ್ನದಲ್ಲಿ ಹೈಟೆನ್ಶನ್ ವಿದ್ಯುತ್ ವಯರ್ ಅನ್ನು ಆಕಸ್ಮಿಕವಾಗಿ ಸ್ಪರ್ಶಿಸಿದ್ದಾರೆ. ಇದರಿಂದ ಇಬ್ಬರಿಗೂ ತೀವ್ರತರದ ಸುಟ್ಟ ಗಾಯಗಳಾಗಿವೆ. ಆಸ್ಪತ್ರೆ ಮೂಲಗಳ ಪ್ರಕಾರ ಇಬ್ಬರೂ ಬಾಲಕರಿಗೆ ಶೇ.60ಕ್ಕಿಂತ ಹೆಚ್ಚು ಸುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ.