ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ವಿಳಂಬದಿಂದ ಬಾಲಕ ಸಾವು: ಮೃತದೇಹವನ್ನು ಜೆಡಿಎಸ್ ಸಮಾವೇಶಕ್ಕೆ ಹೊತ್ತುತಂದ ಪೋಷಕರು!

ಮಧುಗಿರಿ ವಿಧಾನಸಭಾ ಕ್ಷೇತ್ರದ ಕೊಡಿಗೇನಹಳ್ಳಿಯಲ್ಲಿ ಮನೆಯ ಸಂಪ್‌ನಲ್ಲಿ ಮುಳುಗಿದ್ದ ನಾಲ್ಕು ವರ್ಷದ ಬಾಲಕ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ (ಪಿಎಚ್‌ಸಿ) ಚಿಕಿತ್ಸೆ ವಿಳಂಬದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಬಾಲಕನ ಮೃತದೇಹ ಹಿಡಿದು ನಿಂತಿರುವ ಜೆಡಿಎಸ್ ನಾಯಕರು.
ಬಾಲಕನ ಮೃತದೇಹ ಹಿಡಿದು ನಿಂತಿರುವ ಜೆಡಿಎಸ್ ನಾಯಕರು.

ತುಮಕೂರು: ಮಧುಗಿರಿ ವಿಧಾನಸಭಾ ಕ್ಷೇತ್ರದ ಕೊಡಿಗೇನಹಳ್ಳಿಯಲ್ಲಿ ಮನೆಯ ಸಂಪ್‌ನಲ್ಲಿ ಮುಳುಗಿದ್ದ ನಾಲ್ಕು ವರ್ಷದ ಬಾಲಕ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ (ಪಿಎಚ್‌ಸಿ) ಚಿಕಿತ್ಸೆ ವಿಳಂಬದಿಂದ ಮೃತಪಟ್ಟಿರುವ ಘಟನೆ ನಡೆದಿದೆ.

ಶುಕ್ರವಾರ ಕೊಡಿಗೇನಹಳ್ಳಿ ಗ್ರಾಮದಲ್ಲಿ ನಡೆದ ಜೆಡಿಎಸ್ ಪಕ್ಷದ ಪಂಚರತ್ನ ಯಾತ್ರೆ ನಡೆಯುತ್ತಿತ್ತು. ಯಾತ್ರೆ ನಡೆಯುತ್ತಿದ್ದ ಸ್ಥಳಕ್ಕೆ ಬಾಲಕನ ಮೃತದೇಹ ಹೊತ್ತು ಪೋಷಕರು ಬಂದಿದ್ದಾರೆ. ಬಳಿಕ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಇಲ್ಲದ ಕಾರಣ ಚಿಕಿತ್ಸೆ ವಿಳಂಬವಾಗಿ ಬಾಲಕ ಮೃತಪಟ್ಟಿರುವ ವಿಚಾರ ತಿಳಿಸಿದ್ದಾರೆ.

ಸ್ಥಳದಲ್ಲಿ ಹೆಚ್‌ಡಿಕೆ ಅವರ ಬೆಂಗಾವಲು ಪಡೆಯಲ್ಲಿದ್ದ ಡಾ ಪುರುಷೋತ್ತಮ್ ಅವರು ಹಾಜರಿದ್ದು, ಈ ವೇಳೆ ಬಾಲಕನನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಬಾಲಕ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.

ಈ ವೇಳೆ ಮಾಜಿ ಸಿಎಂ, ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ಕಾರ್ಯಕ್ರಮವನ್ನು ಮೊಟಕುಗೊಳಿಸಿದರು.

"ಆಂಬ್ಯುಲೆನ್ಸ್ ಲಭ್ಯವಿತ್ತು. ಆದರೆ, ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡಲು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಲಭ್ಯವಿರಲಿಲ್ಲ ಎಂದು ಕುಮಾರಸ್ವಾಮಿಯವರು ಆರೋಪಿಸಿದ್ದಾರೆ. ಅಲ್ಲದೆ, ಇಂತಹ ಕಳಪೆ ಸ್ಥಿತಿ ಕುರಿತು ಆರೋಗ್ಯ ಸಚಿವ ಡಾ ಕೆ ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದರು.

ಅಲ್ಲದೆ, ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಟಿಕೆ ಮತ್ತು ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಅವರೊಂದಿಗೆ ಮಾತನಾಡಿದ ಅವರು, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿದರು.

ಈ ನಡುವೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಡಿ.ಎನ್.ಮಂಜುನಾಥ್ ಅವರು ಸ್ಪಷ್ಟನೆ ನೀಡಿ, ಪಿಎಚ್‌ಸಿಯಲ್ಲಿ ಇಬ್ಬರು ವೈದ್ಯರು ಹಾಗೂ ಮೂವರು ಸ್ಟಾಫ್ ನರ್ಸ್‌ಗಳು ಪಾಳಿಯಲ್ಲಿ ಹಗಲಿರುಳು ಕಾರ್ಯನಿರ್ವಹಿಸುತ್ತಿದ್ದಾರೆಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com