ಟ್ರಾಫಿಕ್ ಕಂಟ್ರೋಲ್ ರೂಮ್ ಸಂಖ್ಯೆಗಳನ್ನು ಆಸ್ಪತ್ರೆಗಳೊಂದಿಗೆ ಹಂಚಿಕೊಳ್ಳಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಮೀಸಲಾದ ತುರ್ತು ಸಂಚಾರ ನಿಯಂತ್ರಣ ಕೊಠಡಿ ಸಂಖ್ಯೆಗಳನ್ನು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳೊಂದಿಗೆ ಹಂಚಿಕೊಳ್ಳಲು ಮತ್ತು ಆ ಆಸ್ಪತ್ರೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಆ್ಯಂಬುಲೆನ್ಸ್ ಚಾಲಕರ ದತ್ತಾಂಶ ಪಡೆದುಕೊಂಡು ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮೀಸಲಾದ ತುರ್ತು ಸಂಚಾರ ನಿಯಂತ್ರಣ ಕೊಠಡಿ ಸಂಖ್ಯೆಗಳನ್ನು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳೊಂದಿಗೆ ಹಂಚಿಕೊಳ್ಳಲು ಮತ್ತು ಆ ಆಸ್ಪತ್ರೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಆ್ಯಂಬುಲೆನ್ಸ್ ಚಾಲಕರ ದತ್ತಾಂಶ ಪಡೆದುಕೊಂಡು ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ.

‘ಸಹಾಯವಾಣಿ ಸಂಖ್ಯೆಯನ್ನು ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೂ ನೀಡಬೇಕು. ಆಯಾ ಆಸ್ಪತ್ರೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಆ್ಯಂಬುಲೆನ್ಸ್ ಚಾಲಕರ ದತ್ತಾಂಶ ಪಡೆದು ಪೊಲೀಸರಿಗೆ ಮಾಹಿತಿ ಒದಗಿಸಬೇಕು. ಇದರಿಂದ ಆ್ಯಂಬುಲೆನ್ಸ್ ಸಂಚರಿಸುವ ಮಾರ್ಗಗಳಲ್ಲಿ ದಟ್ಟಣೆ ನಿವಾರಿಸಲು ಪೊಲೀಸರಿಗೆ ಸಹಾಯವಾಗುತ್ತದೆ ಹಾಗೂ ಹುಸಿ ಕರೆಗಳ ಪರಿಶೀಲನೆಗೆ ಸಹಾಯವಾಗುತ್ತದೆ ಎಂಬುದನ್ನು ಮನವರಿಕೆ ಮಾಡಿಸಬೇಕು’ ಎಂದು ಹೇಳಿದೆ.

ಭಾರತ್ ಪುನರುತ್ಥಾನ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಏತನ್ಮಧ್ಯೆ, ರಾಜ್ಯದಲ್ಲಿ ಒಟ್ಟು 12,107 ಸರ್ಕಾರಿ ಮತ್ತು ಖಾಸಗಿ ಆಂಬ್ಯುಲೆನ್ಸ್‌ಗಳಲ್ಲಿ 3,368 ಆಂಬ್ಯುಲೆನ್ಸ್‌ಗಳಿಗೆ ಜಿಪಿಎಸ್ ಅಳವಡಿಸಲಾಗಿದೆ, ಉಳಿದ ಆಂಬ್ಯುಲೆನ್ಸ್‌ಗಳಿಗೂ ಜಿಪಿಎಸ್ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು. ಸಂಚರಿಸುವ ಮಾರ್ಗದ ಕುರಿತು ಸಂಚಾರ ದಟ್ಟಣೆ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡುವಂತೆ ಎಲ್ಲ ಆಂಬ್ಯುಲೆನ್ಸ್‌ಗಳ ಚಾಲಕರಿಗೆ ಮಾಹಿತಿ ನೀಡಲಾಗಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ಮಾಹಿತಿ ನೀಡಿತು.

‘ಸಂಚಾರ ಮಾರ್ಗದ ಕುರಿತು ಸಂಚಾರ ದಟ್ಟಣೆ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡುವಂತೆ ಎಲ್ಲಾ ಆ್ಯಂಬುಲೆನ್ಸ್ ಚಾಲಕರಿಗೆ ಮಾಹಿತಿ ನೀಡಲಾಗಿದೆ. ಅದಕ್ಕಾಗಿ ವಿಶೇಷ ಸಹಾಯವಾಣಿ ಸಂಖ್ಯೆಯನ್ನೂ ಪ್ರಕಟಿಸಲಾಗಿದೆ. ‘ಸಂಯೋಜಿತ ಆ್ಯಂಬುಲೆನ್ಸ್ ಸೇವೆಗೆ ಟೆಂಡರ್ ಕರೆಯಲಾಗಿತ್ತು. ಆದರೆ, ಈವರೆಗೂ ಬಿಡ್ ಸ್ವೀಕರಿಸಿಲ್ಲ. ಮುಂದಿನ 15 ದಿನಗಳಲ್ಲಿ ಹೊಸದಾಗಿ ಟೆಂಡರ್ ಅಧಿಸೂಚನೆ ಹೊರಡಿಸಲು ಸರ್ಕಾರ ಸೂಚಿಸಿದೆ’ ಎಂಬ ಮಾಹಿತಿ ನೀಡಿತು.

ಇದನ್ನು ಪರಿಗಣಿಸಿದ ನ್ಯಾಯಪೀಠ, ‘15 ದಿನಗಳವರೆಗೆ ಕಾಯದೆ ಆದಷ್ಟು ಶೀಘ್ರವೇ ಅನುಮೋದನೆ ನೀಡಬೇಕು’ ಎಂದು ಸೂಚಿಸಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com