ಬೆಂಗಳೂರು: 30 ವರ್ಷದ ಅಪರಿಚಿತ ವ್ಯಕ್ತಿಯ ಬರ್ಬರ ಹತ್ಯೆ; ಕೆ.ಪಿ.ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು

ನಗರದ ಕೆಪಿ ಅಗ್ರಹಾರದ ಐದನೇಯ ಕ್ರಾಸ್​ನ ಹೇಮಂತ್​ ಮೆಡಿಕಲ್​ ಮುಂಭಾಗದಲ್ಲಿ ತಡರಾತ್ರಿ 12.30 ರ ಸುಮಾರಿಗೆ 30 ವರ್ಷದ ಅಪರಿಚಿತ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ನಗರದ ಕೆಪಿ ಅಗ್ರಹಾರದ ಐದನೇಯ ಕ್ರಾಸ್​ನ ಹೇಮಂತ್​ ಮೆಡಿಕಲ್​ ಮುಂಭಾಗದಲ್ಲಿ ತಡರಾತ್ರಿ 12.30 ರ ಸುಮಾರಿಗೆ 30 ವರ್ಷದ ಅಪರಿಚಿತ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಈ ಕೃತ್ಯದಲ್ಲಿ ಮೂವರು ಪುರುಷರು ಹಾಗೂ ಮೂವರು ಮಹಿಳೆಯರು ಸೇರಿದ್ದಾರೆ ಎಂಬ ಮಾಹಿತಿ ಇದ್ದು, ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

ಸ್ಥಳಕ್ಕೆ ಮಾಗಡಿ ರಸ್ತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮುಖ ಸಂಪೂರ್ಣವಾಗಿ ಗುರುತು ಸಿಗದಂತೆ ಮುಖವನ್ನು ಜಜ್ಜಿ ಕೊಲೆ ಮಾಡಲಾಗಿದೆ. ಸದ್ಯ ಮೃತನ ಗುರುತು ಪತ್ತೆ ಮಾಡುತ್ತಿದ್ದಾರೆ. ಕೆ ಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com