ಬಿಜೆಪಿ ಜನಸಂಕಲ್ಪ ಯಾತ್ರೆಗೆ ಜನತೆಯಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ: ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಬಿಜೆಪಿಯ 'ಜನ ಸಂಕಲ್ಪ ಯಾತ್ರೆ'ಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಇದನ್ನು ಡಿಸೆಂಬರ್ ತಿಂಗಳಲ್ಲಿ ಇನ್ನಷ್ಟು ತೀವ್ರಗೊಳಿಸಿ ಜನರ ವಿಶ್ವಾಸ ಪಡೆಯುತ್ತೇವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದ್ದಾರೆ.
Published: 04th December 2022 01:02 PM | Last Updated: 04th December 2022 02:13 PM | A+A A-

ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿಯ 'ಜನ ಸಂಕಲ್ಪ ಯಾತ್ರೆ'ಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಇದನ್ನು ಡಿಸೆಂಬರ್ ತಿಂಗಳಲ್ಲಿ ಇನ್ನಷ್ಟು ತೀವ್ರಗೊಳಿಸಿ ಜನರ ವಿಶ್ವಾಸ ಪಡೆಯುತ್ತೇವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಹತ್ತಿರ ಇರುವುದರಿಂದ ಪ್ರತಿ ಬಾರಿಯಂತೆ ಜನರ ಬಳಿ ಹೋಗುತ್ತಿದ್ದೇವೆ. ನಮ್ಮ ಜನ ಸಂಕಲ್ಪ ಯಾತ್ರೆ ಈಗಾಗಲೇ ಹೈದರಾಬಾದ್ ಕರ್ನಾಟಕ, ಮಧ್ಯ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದಲ್ಲಿ ನಡೆದಿದೆ. ಈ ಯಾತ್ರೆಯನ್ನು ತೀವ್ರಗೊಳಿಸುತ್ತೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ವಸತಿ ಯೋಜನೆಯಲ್ಲಿ ಶೇ.3 ರಷ್ಟು ದಿವ್ಯಾಂಗರಿಗೆ ಮೀಸಲು: ಮುಖ್ಯಮಂತ್ರಿ ಬೊಮ್ಮಾಯಿ
ಇದರ ಜೊತೆಗೆ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ, ಜನರ ವಿಶ್ವಾಸ ಗಳಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
ಇದೇ ವೇಳೆ ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪದಲ್ಲಿ ಗೋಡೆ ಬರಹ ವಿಚಾರವಾಗಿ ಮಾತನಾಡಿ, ಈ ಸಂಬಂಧ ಸ್ಥಳೀಯ ಪೊಲೀಸರು ತನಿಖೆ ಮಾಡುತ್ತಿದ್ದು, ಕ್ರಮಕೈಗೊಳ್ಳುತ್ತಿದ್ದಾರೆಂದು ಹೇಳಿದರು.