ಬೆಳ್ತಂಗಡಿ: ಎರ್ಮಾಯಿ ಫಾಲ್ಸ್ ಬಳಿಯ ತೊಟ್ಲಾಯಿ ಹೊಳೆ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಎರ್ಮಾಯಿ ಫಾಲ್ಸ್ ಸಮೀಪದ ಹೊಳೆ ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೊಬ್ಬರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Published: 04th December 2022 01:49 PM | Last Updated: 04th December 2022 01:49 PM | A+A A-

ಸಾಂದರ್ಭಿಕ ಚಿತ್ರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಎರ್ಮಾಯಿ ಫಾಲ್ಸ್ ಸಮೀಪದ ಹೊಳೆ ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೊಬ್ಬರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಧರ್ಮಸ್ಥಳ ಗ್ರಾಮದ ದೊಂಡೋಲೆ ನಿವಾಸಿ ಕೇಶವ ಭಂಡಾರಿ ಅವರ ಪುತ್ರ, ಉಜಿರೆ ಪಿಯು ಕಾಲೇಜಿನಲ್ಲಿ ದ್ವಿತೀಯ ವರ್ಷ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ವಿವೇಕ್ ಎಂದು ಗುರುತಿಸಲಾಗಿದೆ.
ಶನಿವಾರ ಮಧ್ಯಾಹ್ನದ ನಂತರ ಕಾಲೇಜಿಗೆ ರಜೆ ಇದ್ದದ್ದರಿಂದ ವಿವೇಕ್ ಮತ್ತು ಆತನ ಏಳು ಮಂದಿ ಸ್ನೇಹಿತರು ಎರ್ಮಾಯಿ ಫಾಲ್ಸ್‌ಗೆ ತೆರಳುತ್ತಿದ್ದರು. ಬಳಿಕ ಕಲ್ಲಂಡ ಪರಿಸರದ ತೊಟ್ಲಾಯಿ ಹೊಳೆಯಲ್ಲಿ ಸ್ನಾನಕ್ಕೆಂದು ಇಳಿದಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಕ್ಕಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ಸೆಲ್ಫಿ ತೆಗೆದುಕೊಳ್ಳುವಾಗ ಕಿತವಾಡ ಫಾಲ್ಸ್ ಗೆ ಬಿದ್ದು ಬೆಳಗಾವಿಯ ನಾಲ್ವರು ಯುವತಿಯರ ಸಾವು, ಓರ್ವಳ ಸ್ಥಿತಿ ಗಂಭೀರ!
ಬಳಿಕ ಮೃತದೇಹವನ್ನು ಹೊರತೆಗೆಯಲು ಸ್ಥಳೀಯರು ಸಹಕರಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.