ಕನ್ನಡ ಬಾವುಟ ಹಾರಿಸಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ: ಪೊಲೀಸರು ತಾಳ್ಮೆಯಿಂದಿರಬೇಕು ಎಂದ ಸತೀಶ್ ಜಾರಕಿಹೊಳಿ

ಕನ್ನಡ ಬಾವುಟ ಹಾರಿಸಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯಂತಹ ನಗರದಲ್ಲಿ ಕನ್ನಡ-ಮರಾಠಿ ವಿಚಾರದಲ್ಲಿ ಚಕಾರವೆತ್ತದಿರುವುದು ಒಳಿತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು
ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ

ಬೆಳಗಾವಿ: ಕನ್ನಡ ಬಾವುಟ ಹಾರಿಸಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯಂತಹ ನಗರದಲ್ಲಿ ಕನ್ನಡ-ಮರಾಠಿವಿಚಾರದಲ್ಲಿ ಚಕಾರವೆತ್ತದಿರುವುದು ಒಳಿತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

ಭಾನುವಾರ ಬೆಳಗಾವಿಯ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಮಾತನಾಡಿದ ಅವರು, 'ಕನ್ನಡದ ಧ್ವಜ ಹಾರಿಸಿದ್ದಕ್ಕೆ ಬಾಲಕನ ಮೇಲೆ ಹಲ್ಲೆ ನಡೆಸಿದ ಘಟನೆಯಲ್ಲಿ ಜಾತೀಯತೆ ತರುವುದು ಸರಿಯಲ್ಲ ಎಂದಿದ್ದಾರೆ.

ಘಟನೆ ನಂತರ, ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಆರೋಪದ ಮೇಲೆ ಡಿಸಿಪಿ (ಎಲ್ & ಒ) ರವೀಂದ್ರ ಗಡಾಡಿ ಅವರನ್ನು ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಕೆಲವರು ಪ್ರತಿಭಟನೆ ನಡೆಸಿದರೆ, ಮತ್ತೊಂದು ಗುಂಪು ಡಿಸಿಪಿಯನ್ನು ಬೆಂಬಲಿಸಿತು.

'ಬೆಳಗಾವಿಯನ್ನು ಎಲ್ಲಾ ರೀತಿಯ ಅಂಶಗಳಲ್ಲಿ ವಿಸ್ತರಿಸಲು ನಾವು ಅವಕಾಶಗಳನ್ನು ಹುಡುಕಬೇಕು. ಈ ಹಿಂದೆ ಬೆಳಗಾವಿಯಲ್ಲಿ ಕೋಮುಗಲಭೆ ನಡೆದಿದ್ದು ಈಗ ಅದು ನಿಂತಿದೆ. ಇಂತಹ ಘಟನೆಗಳನ್ನು ದೊಡ್ಡ ವಿಷಯವನ್ನಾಗಿ ಮಾಡುವುದು ಸರಿಯಲ್ಲ. ಪೊಲೀಸರು ತಾಳ್ಮೆಯಿಂದ ವರ್ತಿಸಬೇಕು ಮತ್ತು ಘಟನೆಯನ್ನು ವಿಭಿನ್ನ ರೀತಿಯಲ್ಲಿ ನಿಭಾಯಿಸಬಹುದಿತ್ತು. ಇಂತಹ ಪ್ರಕರಣಗಳಲ್ಲಿ ದಿಟ್ಟ ನಿರ್ಧಾರ ಕೈಗೊಳ್ಳುವ ತಾಕತ್ತು ಸರ್ಕಾರಕ್ಕಿಲ್ಲ' ಎಂದರು.

ಬೆಳಗಾವಿಯ ಟಿಳಕವಾಡಿಯಲ್ಲಿನ ಗೋಗಟೆ ಕಾಲೇಜಿನಲ್ಲಿ ನಡೆದಿದೆ. ಕಾಲೇಜಿನಲ್ಲಿ ಅಂತರ ಕಾಲೇಜು ಉತ್ಸವ ಕಾರ್ಯಕ್ರಮದಲ್ಲಿ ಕನ್ನಡ ಬಾವುಟ ಹಿಡಿದು ವಿದ್ಯಾರ್ಥಿ ಡ್ಯಾನ್ಸ್​ ಮಾಡಿದ್ದಾನೆ. ಇದನ್ನು ಕಂಡ ಸಹಪಾಠಿಗಳು ಕನ್ನಡ ಬಾವುಟ ಪ್ರದರ್ಶಿಸಿದ ವಿದ್ಯಾರ್ಥಿಗೆ ಥಳಿಸಿದ್ದಾರೆ. ಥಳಿಸಿದ ವಿದ್ಯಾರ್ಥಿಗಳು ಮಹಾರಾಷ್ಟ್ರ ಪರವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com