2023ನೇ ಸಾಲಿನ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2023ನೇ ಸಾಲಿನ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ.
ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು (ಸಾಂಕೇತಿಕ ಚಿತ್ರ)
ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು (ಸಾಂಕೇತಿಕ ಚಿತ್ರ)

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2023ನೇ ಸಾಲಿನ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ.

ಮಾರ್ಚ್​ 31ರಿಂದ ಏಪ್ರಿಲ್ 15ರವರೆಗೆ 10ನೇ ತರಗತಿಯ  ಪರೀಕ್ಷೆಗಳು ನಡೆಯಲಿದ್ದು, ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಅಧಿಕೃತ ವೆಬ್‌ತಾಣದಲ್ಲಿ ಪರಿಶೀಲಿಸಬಹುದಾಗಿದೆ.

ಪರೀಕ್ಷಾ ವೇಳಾಪಟ್ಟಿ
ಮಾರ್ಚ್​ 31 ಮೊದಲ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ ಪರೀಕ್ಷೆಗಳು ನಡೆಯಲಿವೆ.
ಏಪ್ರಿಲ್ 4 ರಂದು ಗಣಿತ, ಸಮಾಜ ಶಾಸ್ತ್ರ
ಏಪ್ರಿಲ್ 6 ರಂದು ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ
ಏಪ್ರಿಲ್ 8 ರಂದು ಅರ್ಥಶಾಸ್ತ್ರ
ಏಪ್ರಿಲ್ 10 ರಂದು ವಿಜ್ಞಾನ, ರಾಜ್ಯಶಾಸ್ತ್ರ
ಏಪ್ರಿಲ್ 12 ರಂದು ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲಿಷ್
ಏಪ್ರಿಲ್ 15ರಂದು ಸಮಾಜ ವಿಜ್ಞಾನ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com