2021ನೇ ಸಾಲಿನ 'ಏಕಲವ್ಯ, ಜೀವಮಾನ ಸಾಧನೆ ಸೇರಿದಂತೆ ಹಲವು ಕ್ರೀಡಾ ಪ್ರಶಸ್ತಿ ಪ್ರದಾನ

ಕ್ರೀಡಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈದ ಸಾಧಕರಿಗೆ ರಾಜ್ಯ ಸರ್ಕಾರದಿಂದ ನೀಡುವ  2021ನೇ ಸಾಲಿನ 'ಏಕಲವ್ಯ' ಜೀವಮಾನ ಸಾಧನೆ ಹಾಗೂ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕ್ರೀಡಾ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಸಿಎಂ ಬೊಮ್ಮಾಯಿ
ಕ್ರೀಡಾ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಸಿಎಂ ಬೊಮ್ಮಾಯಿ

ಬೆಂಗಳೂರು: ಕ್ರೀಡಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈದ ಸಾಧಕರಿಗೆ ರಾಜ್ಯ ಸರ್ಕಾರದಿಂದ ನೀಡುವ  2021ನೇ ಸಾಲಿನ 'ಏಕಲವ್ಯ' ಜೀವಮಾನ ಸಾಧನೆ ಹಾಗೂ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. 

ಇದೇ ಸಂದರ್ಭದಲ್ಲಿ  2022-23 ನೇ ಸಾಲಿನ ಕ್ರೀಡಾ ಪೋಷಕ ಪ್ರಶಸ್ತಿ, 36 ನೇ ರಾಷ್ಟ್ರೀಯ ಕ್ರೀಡಾಕೂಟದ ಪದಕ ವಿಜೇತ ಕ್ರೀಡಾಪಟುಗಳಿಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.  ಏಕಲವ್ಯ ಪ್ರಶಸ್ತಿಯು ಏಕಲವ್ಯ ಕಂಚಿನ ಪ್ರತಿಮೆ, ಪ್ರಶಸ್ತಿ ಪತ್ರ, ಸಮವಸ್ತ್ರ, 2 ಲಕ್ಷ ರೂ. ನಗದು ಬಹುಮಾನ ಒಳಗೊಂಡಿರುತ್ತದೆ.

ನಂತರ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಯುವ ಸಾಧಕರು  ದೇಶದ ಅತ್ಯುನ್ನತ ಆಸ್ತಿಗಳು ಮತ್ತು ಪ್ರೇರಕ ಶಕ್ತಿಗಳು ಎಂದರು. ಏನಾದರೂ ಸಾಧನೆ ಮಾಡಬೇಕಾದರೆ ಅದರ ಹಿಂದೆ ದೊಡ್ಡ ಪರಿಶ್ರಮವಿರುತ್ತದೆ. ಏಕಾಗ್ರತೆಯಿಂದ ಪರಿಶ್ರಮ ಪಟ್ಟರೆ ಯಶಸ್ಸು ಸಾಧ್ಯವಾಗುತ್ತದೆ. ಪ್ರಥಮ ಬಾರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಕ್ರೀಡೆಗೆ ಮಹತ್ವ ಕೊಡುತ್ತಿದೆ. ಕ್ರೀಡೆ ಒಂದು ಹವ್ಯಾಸಿವಾಗಿ ಪ್ರಾರಂಭವಾಗಿ ಇವತ್ತು ರಾಷ್ಟ್ರೀಯ ಸಂಕೇತವಾಗಿ ಬೇರೆ ಬೇರೆ ರಾಷ್ಟ್ರಗಳನ್ನು ಕ್ರೀಡೆಯ ಸಾಧನೆಯ ಸರಣಿಯಲ್ಲಿ ನೋಡಲಾಗುತ್ತಿದೆ. ಹೀಗಾಗಿ ಒಂದು ರಾಷ್ಟ್ರವಾಗಿ ಕ್ರೀಡೆಯನ್ನು ಯೋಜನೆಯಾಗಿ ಪ್ರಮುಖವಾಗಿ ತರುವ ಅಗತ್ಯವಿದೆ. ಅದನ್ನು ಪ್ರಧಾನಿ ಮೋದಿ ಯಶಸ್ವಿಯಾಗಿ ಮಾಡಿದ್ದಾರೆ ಎಂದರು.

 
ಖೇಲೋ ಇಂಡಿಯಾ, ಫಿಟ್ ಇಂಡಿಯಾ, ಜಿತೋ ಇಂಡಿಯಾ, ಮತ್ತಿತರ ಕ್ರೀಡಾ ಪ್ರೋತ್ಸಾಹಗಳ  ಮೂಲಕ ಪ್ರಧಾನಿ ನರೇಂದ್ರ ಮೋದಿ ಕ್ರೀಡೆಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಕಳೆದ ವರ್ಷ ಆಗಸ್ಟ್ 15 ರಂದು ಮುಂದಿ ಮುಂದಿನ ಪ್ಯಾರೀಸ್ ಒಲಿಂಪಿಕ್ಸ್ ಗೆ 75 ಕ್ರೀಡಾಪಟುಗಳನ್ನು ದತ್ತು ಪಡೆದಿದ್ದೇವೆ. ಅವರಿಗೆ ನಾಲ್ಕು ವರ್ಷಗಳ ಕಾಲ ತರಬೇತಿ, ವಿದ್ಯಾಭ್ಯಾಸ ನೀಡಲಾಗುತ್ತಿದೆ. ಅವರಿಗೆ 10 ಲಕ್ಷ ನೀಡಲಾಗುತ್ತಿದೆ. ಅಗತ್ಯವಿದ್ದರೆ ಇನ್ನೂ 10 ಲಕ್ಷ ರೂ. ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com