ಅಡ್ಡಂಡ ಕಾರ್ಯಪ್ಪ ಬರೆದ 'ಟಿಪ್ಪು ನಿಜ ಕನಸುಗಳು' ಪುಸ್ತಕ ಮಾರಾಟ ಮೇಲಿದ್ದ ತಡೆಯಾಜ್ಞೆ ತೆರವು!
ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಬರೆದಿರುವ ಟಿಪ್ಪು ನಿಜ ಕನಸುಗಳು ಪುಸ್ತಕ ಮಾರಾಟ ಹಾಗೂ ಹಂಚಿಕೆಗೆ ನೀಡಿದ್ದ ತಡೆಯಾಜ್ಞೆಯನ್ನು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ತೆರವುಗೊಳಿಸಿದೆ.
Published: 08th December 2022 11:48 PM | Last Updated: 09th December 2022 01:34 PM | A+A A-

ಅಡ್ಡಂಡ ಸಿ ಕಾರ್ಯಪ್ಪ
ಬೆಂಗಳೂರು: ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಬರೆದಿರುವ ಟಿಪ್ಪು ನಿಜ ಕನಸುಗಳು ಪುಸ್ತಕ ಮಾರಾಟ ಹಾಗೂ ಹಂಚಿಕೆಗೆ ನೀಡಿದ್ದ ತಡೆಯಾಜ್ಞೆಯನ್ನು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ತೆರವುಗೊಳಿಸಿದೆ.
ಈ ಹಿಂದೆ ಪುಸ್ತಕ ಮಾರಾಟಕ್ಕೆ ಇದೇ ಸಿಟಿ ಸಿವಿಲ್ ಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ವಿಧಿಸಿತ್ತು. ಆದರೆ ಇಂದು ತಡೆಯಾಜ್ಞೆ ತೆರವುಗೊಳಿಸುವ ಮೂಲಕ ಪುಸ್ತಕ ಮಾರಾಟದ ಹಾದಿಯನ್ನು ಸುಗಮಗೊಳಿಸಿದೆ.
ವಕ್ಫ್ ಬೋರ್ಡ್ ಸಮಿತಿ ಮಾಜಿ ಅಧ್ಯಕ್ಷ ಬಿ.ಎಸ್. ರಫೀವುಲ್ಲಾ ಟಿಪ್ಪು ನಿಜ ಕನಸುಗಳು ಪುಸ್ತಕ ಮಾರಾಟಕ್ಕೆ ಅವಕಾಶ ನೀಡಬಾರದು ಎಂದು ಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ ನವೆಂಬರ್ 21ರಂದು ಕೋರ್ಟ್ ಪುಸ್ತಕ ಮಾರಾಟ. ಹಂಚಿಕೆಗೆ ಮಧ್ಯಂತರ ತಡೆ ನೀಡಿತ್ತು.
ಇದನ್ನೂ ಓದಿ: ಟಿಪ್ಪು ಸುಲ್ತಾನ್ ಕುರಿತ ಕನ್ನಡ ನಾಟಕ, ಪುಸ್ತಕದ ಲೇಖಕ-ನಿರ್ದೇಶಕರಿಗೆ ಕೊಲೆ ಬೆದರಿಕೆ
ರಫೀವುಲ್ಲಾ ಅವರು ತಮ್ಮ ಅರ್ಜಿಯಲ್ಲಿ ಟಿಪ್ಪು ನಿಜ ಕನಸುಗಳು ಪುಸ್ತಕದಲ್ಲಿ ಟಿಪ್ಪು ಕ್ರೂರಿ ಎಂದು ಬಿಂಬಿಸಲಾಗಿದೆ. ಆದರೆ ಟಿಪ್ಪು ಸ್ವಾತಂತ್ರ್ಯ ಹೋರಾಟಗಾರ ಎಂದು ಉಲ್ಲೇಖಿಸಿದ್ದರು.