ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಗಳ ನವೀಕರಿಸಲು ಅಧಿಕಾರಿಗಳು ಮುಂದು!
ರಾಜ್ಯ ಉನ್ನತ ಶಿಕ್ಷಣ ಇಲಾಖೆಯು ತನ್ನ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಹಲವಾರು ವ್ಯವಸ್ಥೆಗಳನ್ನು ನವೀಕರಿಸಲು ಮುಂದಾಗಿದೆ.
Published: 08th December 2022 10:49 AM | Last Updated: 08th December 2022 11:28 AM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯ ಉನ್ನತ ಶಿಕ್ಷಣ ಇಲಾಖೆಯು ತನ್ನ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಹಲವಾರು ವ್ಯವಸ್ಥೆಗಳನ್ನು ನವೀಕರಿಸಲು ಮುಂದಾಗಿದೆ.
ಈ ಸಂಬಂಧ ಉನ್ನತ ಶಿಕ್ಷಣದ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರು ಮಾತನಾಡಿ, ನಾಲ್ಕು ಹಂತದ ಕುಂದುಕೊರತೆ ನಿವಾರಣಾ ವ್ಯವಸ್ಥೆಯನ್ನು ಇದನ್ನು ಹೊಂದಿರುತ್ತದೆ. ಇದು ನಿವೃತ್ತಿಯಾಗುವ ಸಿಬ್ಬಂದಿ ಮತ್ತು ಅಧ್ಯಾಪಕರ ಪಿಂಚಣಿ ಸಂಬಂಧಿತ ಪ್ರಕರಣಗಳ ಪರಿಷ್ಕರಿಸುವುದನ್ನು ಹೊಂದಿರುತ್ತದೆ.
“ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿನ ದ್ವಂದ್ವವನ್ನು ಹೋಗಲಾಡಿಸುವುದು ಇದರ ಗುರಿಯಾಗಿದೆ. ಮಾಹಿತಿಯನ್ನು ನಮೂದಿಸಲು ಮಧ್ಯಸ್ಥಗಾರರಿಗೆ ಪ್ರವೇಶದ ಒಂದು ಅವಕಾಶ ಇರಬೇಕು, ಇದರಿಂದ ಅದು ಇಲಾಖೆ, ಅಧಿಕಾರಿಗಳು, ವಿಶ್ವವಿದ್ಯಾಲಯ ಮತ್ತು ಕಾಲೇಜಿಗೆ ಲಭ್ಯವಿರುತ್ತದೆ.
ಇದನ್ನೂ ಓದಿ: ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿಗೆ ಮೈಂಡ್‌ಟ್ರೀ ಸಿಇಒ ಸೇರಿ 9 ಮಂದಿ ನೇಮಕ
ಡಿಜಿಟಲ್ ಕಲಿಕೆ ಮತ್ತು ಏಕೀಕೃತ ಡೇಟಾ ಎರಡು ಅತ್ಯುತ್ತಮ ಅಭ್ಯಾಸಗಳಾಗಿವೆ. ಆದ್ದರಿಂದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಇವುಗಳು ಅನುಸರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಸಿ ಎನ್ ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ.
ಏತನ್ಮಧ್ಯೆ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ (ಡಿಸಿಟಿಇ) ಆಯುಕ್ತ ಪ್ರದೀಪ್ ಪಿ ಮಾತನಾಡಿ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಇಂಗ್ಲಿಷ್ ಮತ್ತು ಕನ್ನಡ ಎರಡರಲ್ಲೂ ಸಂವಹನ ನಡೆಸುವಂತೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳು ತಮ್ಮ ಪರೀಕ್ಷೆಗಳನ್ನು ಇಂಗ್ಲಿಷ್ ಅಥವಾ ಕನ್ನಡದಲ್ಲಿ ಬರೆಯಲು ಅವಕಾಶ ನೀಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.