ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವವರಿಗೆ ಶಾಕ್: ನಗರದ 50 ಜಂಕ್ಷನ್ ಗಳಲ್ಲಿ ಅತ್ಯಾಧುನಿಕ ಕ್ಯಾಮೆರಾ ಫಿಕ್ಸ್; ನಿಯಮ ಉಲ್ಲಂಘಿಸಿದ ಕೂಡ್ಲೆ ಬರುತ್ತೆ ಫೈನ್ ಸ್ಲಿಪ್!

ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ನಿಯಮ ಉಲ್ಲಂಘನೆಗಳನ್ನು ನಿಯಂತ್ರಿಸಲು ನಗರ ಸಂಚಾರಿ ಪೊಲೀಸರು ಪ್ರಮುಖ 50 ಜಂಕ್ಷನ್​ಗಳಲ್ಲಿ ಅತ್ಯಾಧುನಿ ಕ್ಯಾಮೆರಾಗಳನ್ನು ಅಳವಡಿಸಲಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ನಿಯಮ ಉಲ್ಲಂಘನೆಗಳನ್ನು ನಿಯಂತ್ರಿಸಲು ನಗರ ಸಂಚಾರಿ ಪೊಲೀಸರು ಪ್ರಮುಖ 50 ಜಂಕ್ಷನ್​ಗಳಲ್ಲಿ ಅತ್ಯಾಧುನಿ ಕ್ಯಾಮೆರಾಗಳನ್ನು ಅಳವಡಿಸಲಿದ್ದಾರೆ.

ನಗರ ಸಂಚಾರ ವ್ಯವಸ್ಥೆಯಲ್ಲಿ ತಂತ್ರಜ್ಞಾನವನ್ನು ಹತೋಟಿಯಲ್ಲಿಟ್ಟುಕೊಂಡು, ಬೆಂಗಳೂರು ಟ್ರಾಫಿಕ್ ಪೊಲೀಸ್ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ ಪರಿಚಯಿಸುತ್ತಿದೆ, ಇದರಲ್ಲಿ ಕೃತಕ ಬುದ್ಧಿಮತ್ತೆ (AI) ಆಧಾರಿತ ಕ್ಯಾಮೆರಾಗಳು ಏಳು ರೀತಿಯ ಸಂಚಾರ ಉಲ್ಲಂಘನೆಗಳನ್ನು ಪತ್ತೆ ಮಾಡುತ್ತದೆ ಮತ್ತು ವಾಹನ ಮಾಲೀಕರಿಗೆ ಚಲನ್‌ಗಳನ್ನು ಕಳುಹಿಸುತ್ತದೆ.

ಬೆಂಗಳೂರು ಪೊಲೀಸರ ಪ್ರಕಾರ, ಪೊಲೀಸರ ಸಹಾಯವಿಲ್ಲದೆ ಸಂಚಾರ ಉಲ್ಲಂಘನೆಯನ್ನು ಐಟಿಎಂಎಸ್ ಪತ್ತೆಹಚ್ಚುತ್ತದೆ. 50 ಪ್ರಮುಖ ಜಂಕ್ಷನ್‌ಗಳಲ್ಲಿ ಅಳವಡಿಸಲಾಗಿರುವ 250 ಎಎನ್‌ಪಿಆರ್‌ ಕ್ಯಾಮೆರಾಗಳ  ಮೂಲಕ ಸಂಚಾರ ನಿಯಮ ಉಲ್ಲಂಘನೆಯನ್ನು ಸೆರೆಹಿಡಿಯಲಾಗುತ್ತದೆ. ಸ್ವಯಂಚಾಲಿತ ವ್ಯವಸ್ಥೆಯು ನೋಟಿಸ್ ರಚಿಸುತ್ತದೆ. ಮಾತ್ರವಲ್ಲದೆ ಚಲನ್ ಅನ್ನು ಉಲ್ಲಂಘಿಸುವವರಿಗೆ SMS ಕೂಡ ಕಳುಹಿಸುವ ಕೆಲಸ ಮಾಡುತ್ತದೆ.

ಅತಿವೇಗ, ಕೆಂಪು ದೀಪ ಉಲ್ಲಂಘನೆ, ಸ್ಟಾಪ್ ಲೇನ್ ಉಲ್ಲಂಘನೆ, ಹೆಲ್ಮೆಟ್ ಉಲ್ಲಂಘನೆ, ತ್ರಿಬಲ್ ರೈಡಿಂಗ್, ಚಾಲನೆ ವೇಳೆ ಮೊಬೈಲ್ ಬಳಕೆ ಮತ್ತು ಸೀಟ್ ಬೆಲ್ಟ್ ಇಲ್ಲದೆ ವಾಹನ ಚಲಾಯಿಸುವುದು ಮುಂತಾದ ಅನೇಕ ಸಂಚಾರ ಉಲ್ಲಂಘನೆಗಳನ್ನು ಐಟಿಎಂಎಸ್ ಪತ್ತೆ ಮಾಡಲಿದೆ. ಆದರೆ ಈ ಕ್ರಮವನ್ನು ವಾಹನ ಸವಾರರಿಂದ ದಂಡ ವಸೂಲಿ ಮಾಡಲು ಅಳವಡಿಸಲಾಗುತ್ತಿಲ್ಲ. ನಗರದಲ್ಲಿ ಸಂಚಾರ ಶಿಸ್ತು ಹೆಚ್ಚಿಸುವ ಉದ್ದೇಶದಿಂದ ಈ ಕ್ರಮ ಅಳವಡಿಸಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಐಟಿಎಂಎಸ್ ವ್ಯವಸ್ಥೆಯನ್ನು 50 ಜಂಕ್ಷನ್​ಗಳಲ್ಲಿ ಶೀಘ್ರದಲ್ಲೇ ಪ್ರಾರಂಭಿಸಲಾಗುವುದು. ಯಾವುದೇ ಸಂಚಾರ ನಿಯಮಗಳನ್ನು ಉಲ್ಲಂಘಿಸಬೇಡಿ. ಉದ್ದೇಶವು ದಂಡವನ್ನು ಸಂಗ್ರಹಿಸುವುದು ಅಲ್ಲ. ಇದು ಸಂಪರ್ಕರಹಿತವಾಗಿದೆ, ವಾರದ 7 ದಿನವೂ ಈ ವ್ಯವಸ್ಥೆ ಸಕ್ರಿಯವಾಗಿರಲಿದೆ. ಉತ್ತಮ ರಸ್ತೆ ನಡವಳಿಕೆ ಮತ್ತು ಅನುಸರಣೆಯನ್ನು ಹೆಚ್ಚಿಸುವುದು ಗುರಿಯಾಗಿದೆ.

"ಈ ಕ್ಯಾಮೆರಾಗಳು ದಿನದ 24 ಗಂಟ ವಾರದ 7 ದಿನವೂ ರೆಕಾರ್ಡ್ ಮಾಡುತ್ತವೆ, ಇವು ಸಿಸ್ಟಮ್ ಸ್ವಯಂಚಾಲಿತವಾಗಿದೆ, ಇದು ಸಂಚಾರ ನಿರ್ವಹಣೆ ಮತ್ತು ನಿಯಂತ್ರಣಕ್ಕಾಗಿ ಬಳಸಬಹುದಾದ ಬಹಳಷ್ಟು ಮಾನವಶಕ್ತಿಯನ್ನು ಉಳಿಸುತ್ತದೆ" ಎಂದು ಆಯುಕ್ತ ಎಂ.ಎ ಸಲೀಂ ಹೇಳಿದ್ದಾರೆ. , ಮುಂದಿನ 2-3 ದಿನಗಳಲ್ಲಿ ಇನ್ನೂ ಐದು ಹೊಸ ಸಂಚಾರ ಠಾಣೆಗಳನ್ನು ಮಂಜೂರು ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಗುರುವಾರ  ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com