ಕಳೆದ 10 ವರ್ಷಗಳಲ್ಲಿ ನರ, ಮಾನಸಿಕ ರೋಗಿಗಳ ಸಂಖ್ಯೆ ಹೆಚ್ಚಳ: ಡಾ. ಕೆ.ಸುಧಾಕರ್

ಕಳೆದ 10 ವರ್ಷಗಳಿಂದ ಮಾನಸಿಕ, ನರರೋಗಗಳು, ಸ್ಟ್ರೋಕ್‌, ತಲೆನೋವಿನಿಂದ ನರಳುತ್ತಿರುವ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. 
ನಿಮ್ಹಾನ್ಸ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಕೆ. ಸುಧಾಕರ್
ನಿಮ್ಹಾನ್ಸ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಕೆ. ಸುಧಾಕರ್
Updated on

ಬೆಂಗಳೂರು: ಕಳೆದ 10 ವರ್ಷಗಳಲ್ಲಿ ನರ, ಮಾನಸಿಕ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವುದು  ಕಳವಳಕಾರಿ ಸಂಗತಿಯಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. 

ನಿಮ್ಹಾನ್ಸ್‌ ನಲ್ಲಿ ಮಿದುಳಿನ ಆರೋಗ್ಯ ಕುರಿತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ವರ್ಷಗಳಲ್ಲಿ ಪಾರ್ಶ್ವವಾಯು, ಮೂರ್ಛೆರೋಗ, ತಲೆನೋವಿನಿಂದ ನರಳುತ್ತಿರುವ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ.
ಮಾನಸಿಕ ಆರೋಗ್ಯದಲ್ಲಿನ ಏರುಪೇರು ಮನುಷ್ಯನ ಆರೋಗ್ಯದಲ್ಲಿ ಸಮಸ್ಯೆ ಸೃಷ್ಟಿಸುವ ಜೊತೆಗೆ ಸಮಾಜಕ್ಕೂ ಆತಂಕ ತರುತ್ತಿದೆ. ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಮನುಷ್ಯ ಆರೋಗ್ಯವಾಗಿರುತ್ತಾನೆ ಎಂದರು.

ಬೆಂಗಳೂರಿನಲ್ಲಿ ನಿಮ್ಹಾನ್ಸ್‌ನಂತಹ ಸಂಸ್ಥೆ ಇರುವುದು ನಮ್ಮ ರಾಜ್ಯದ ಸೌಭಾಗ್ಯವಾಗಿದೆ. ಸಾಂಕ್ರಾಮಿಕವಲ್ಲದ ರೋಗಗಳಿಂದಲೂ ಬ್ರೈನ್‌ಗೆ ಸಂಬಂಧಿಸಿದ ಕಾಯಿಲೆಗಳು ಹೆಚ್ಚಾಗುತ್ತಿದೆ.  ಅಂಕಿ-ಅಂಶಗಳ ಪ್ರಕಾರ ಮಾನಸಿಕ ಅರೋಗ್ಯದಿಂದಲೇ ಸುಮಾರು ಶೇ 7 ರಿಂದ 8 ರಷ್ಟು ಜನರು ಸಾವಿಗೀಡಾಗುತ್ತಿದ್ದು, ಇದು ಸಾವಿಗೆ ಕಾರಣವಾಗಿರುವ ಅಂಶಗಳ ಪೈಕಿ 2ನೇ ಸ್ಥಾನ ಪಡೆದಿದೆ ಎಂದರು. 

ಕೇಂದ್ರ ಸರ್ಕಾರ ಟಿ-ಮನಸ್ ಮೂಲಕ ಮಾನಸಿಕ ರೋಗಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಅಭಿಯಾನವನ್ನು ಮಾಡುತ್ತಿದೆ. ರಾಜ್ಯ ಸರ್ಕಾರ ಹಬ್‌ & ಸ್ಪೋಕ್‌ ಮಾಡೆಲ್‌ ಮೂಲಕ ಈಗಾಗಲೇ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರದಲ್ಲಿ ನಿಮ್ಹಾನ್ಸ್‌ ನೆರವಿನೊಂದಿಗೆ ಪೈಲಟ್‌ ಪ್ರಾಜೆಕ್ಟ್‌ ಮಾಡುತ್ತಿದೆ. ಇದನ್ನು ಮುಂದಿನ ದಿನಗಳಲ್ಲಿ ಈ ಸೇವೆ ರಾಜ್ಯದ ಎಲ್ಲಾ ಕಡೆ ಸಿಗುವಂತೆ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.

ಪಿಎಚ್‌ ಸಿ ವೈದ್ಯರಿಗೆ ಮಾನಸಿಕ ರೋಗಿಗಳಿಗೆ ಕೌನ್ಸಿಲಿಂಗ್‌ ಹಾಗೂ ಚಿಕಿತ್ಸೆ ನೀಡುವ ಬಗ್ಗೆ ಈಗಾಗಲೇ 3 ತಿಂಗಳ ತರಬೇತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಎಎನ್‌ಎಂ, ಸಿಎಚ್‌ಒಗಳಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೂ ಈ ಸಂಬಂಧ ತರಬೇತಿ ನೀಡಿ ಮಾನಸಿಕ ರೋಗಿಗಳಿಗೆ ಹೇಗೆ ಚಿಕಿತ್ಸೆ ನೀಡಬೇಕು ಅನ್ನುವ ಬಗ್ಗೆ ತಿಳಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com