ಕೌಟುಂಬಿಕ ಕಲಹ: ಇಬ್ಬರು ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿದ ತಾಯಿ!
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ.
Published: 09th December 2022 09:36 AM | Last Updated: 09th December 2022 01:41 PM | A+A A-

ಸಂಗ್ರಹ ಚಿತ್ರ
ಕೋಲಾರ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ.
ಆಂಧ್ರಪ್ರದೇಶ ಮೂಲದ ಜ್ಯೋತಿ ಎಂಬಾಕೆ ತನ್ನಿಬ್ಬರು ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಬಳಿಕ ತಾನೂ ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾಳೆ. ಈ ವೇಳೆ ಸ್ಥಳೀಯರು ಆಕೆಯನ್ನು ರಕ್ಷಿಸಿದ್ದಾರೆ. ಬಳಿಕ ಮಕ್ಕಳಿಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಮೊಬೈಲ್ ಗೆ ದಾಸನಾಗಿದ್ದ ಬಾಲಕ, ಹೋಮ್ ವರ್ಕ್ ಮಾಡಲು ಪೋಷಕರು ಬೈದಿದ್ದಕ್ಕೆ ಆತ್ಮಹತ್ಯೆ
8 ವರ್ಷದ ಅಕ್ಷಯ ಮತ್ತು 6 ವರ್ಷದ ಉದಯ ಶ್ರೀಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಇಬ್ಬರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
ಪ್ರಕರಣ ಸಂಬಂಧ ತಾಯಿ ಜ್ಯೋತಿಯನ್ನು ಮುಳಬಾಗಿಲು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಜ್ಯೋತಿ ಪತಿ ತಿರುಮಲೇಶ್ನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.