ನೈತಿಕ ಪೊಲೀಸ್ ಗಿರಿ: ಸಿನಿಮಾ ವೀಕ್ಷಿಸಲು ಬಂದಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಚಿತ್ರಮಂದಿರದಲ್ಲಿ ಕಾಂತಾರ ತುಳು ಸಿನಿಮಾ ನೋಡಲು ಬಂದಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ತಂಡವೊಂದು ಥಳಿಸಿರುವ ಘಟನೆ ಶುಕ್ರವಾರ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಸುಳ್ಯ (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಚಿತ್ರಮಂದಿರದಲ್ಲಿ ಕಾಂತಾರ ತುಳು ಸಿನಿಮಾ ನೋಡಲು ಬಂದಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ತಂಡವೊಂದು ಥಳಿಸಿರುವ ಘಟನೆ ಶುಕ್ರವಾರ ನಡೆದಿದೆ.

ಮೊಹಮ್ಮದ್ ಇಮ್ತಿಯಾಜ್ (20) ಹಾಗೂ ಆತನ ಗೆಳತಿ ಥಳಿತಕ್ಕೊಳಗಾದ ವಿದ್ಯಾರ್ಥಿಗಳಾಗಿದ್ದಾರೆ. ಇಬ್ಬರೂ ವಿದ್ಯಾರ್ಥಿಗಳು ಸಿನಿಮಾ ನೋಡಲು ಚಿತ್ರಮಂದಿರದ ಮುಂದೆ ಕಾದು ಕುಳಿತಿದ್ದಾಗ ಇಬ್ಬರ ಮೇಲೆ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

ದಾಳಿ ಬಳಿಕ ಇಮ್ತಿಯಾಚ್ ಹಾಗೂ ಆತನ ಸ್ನೇಹಿತೆ ಇಬ್ಬರೂ ಸುಳ್ಯ ಪೊಲೀಸರಿಗೆ ದೂರು ನೀಡಿದ್ದು, ಹಲ್ಲೆ ನಡೆಸಿದವರ ಹೆಸರನ್ನು ದೂರಿನಲ್ಲಿ ತಿಳಿಸಿದ್ದಾರೆ. ದೂರಿನಲ್ಲಿ ಆರೋಪಿಗಳು ಜೀವ ಬೆದರಿಕೆ ಹಾಕಿರುವುದಾಗಿಯೂ ಹೇಳಿಕೊಂಡಿದ್ದಾರೆ.

ಹಲ್ಲೆ ನಡೆಸಿದವರನ್ನು ಅಬ್ದುಲ್ ಹಮೀದ್, ಅಶ್ರಫ್, ಸಾದಿಕ್, ಜಬೀರ್ ಜಟ್ಟಿಪಳ್ಳ ಮತ್ತು ಸಿದ್ದಿಕ್ ಬೋರುಗುಡ್ಡೆ ಎಂದು ಗುರುತಿಸಲಾಗಿದೆ.

ದೂರು ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com