ಮಂಗಳೂರಿನ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬುರ್ಖಾ ಧರಿಸಿ ಬಾಲಿವುಡ್ ಹಾಡಿಗೆ ನೃತ್ಯ: ವಿದ್ಯಾರ್ಥಿಗಳು ಅಮಾನತು
ಮಂಗಳೂರಿನ ಹೊರವಲಯದ ವಾಮಂಜೂರಿನ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಕಾರ್ಯಕ್ರಮದಲ್ಲಿ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಜನಪ್ರಿಯ ಬಾಲಿವುಡ್ ಹಾಡಿಗೆ ಡ್ಯಾನ್ಸ್ ಮಾಡಿದ ವಿಡಿಯೋ ವೈರಲ್ ಆದ ನಂತರ ಅವರನ್ನು ಅಮಾನತು ಮಾಡಲಾಗಿದೆ.
Published: 09th December 2022 11:24 AM | Last Updated: 09th December 2022 03:51 PM | A+A A-

ಬುರ್ಖಾ ಧರಿಸಿ ನೃತ್ಯ ಮಾಡಿದ ವಿದ್ಯಾರ್ಥಿಗಳು
ಮಂಗಳೂರು: ಹಿಜಾಬ್, ಧರ್ಮ ದಂಗಲ್ ಗೆ ಸುದ್ದಿಯಾಗಿದ್ದ ಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ಮತ್ತೊಂದು ಘಟನೆ ನಡೆದಿದೆ.
ಮಂಗಳೂರಿನ ಹೊರವಲಯದ ವಾಮಂಜೂರಿನ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಕಾರ್ಯಕ್ರಮದಲ್ಲಿ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಜನಪ್ರಿಯ ಬಾಲಿವುಡ್ ಹಾಡಿಗೆ ಡ್ಯಾನ್ಸ್ ಮಾಡಿದ 17 ಸೆಕೆಂಡ್ ಗಳ ವಿಡಿಯೋ ವೈರಲ್ ಆದ ನಂತರ ಅವರನ್ನು ಅಮಾನತು ಮಾಡಲಾಗಿದೆ.
ವಾಮಂಜೂರಿನ ಖಾಸಗಿ ಕಾಲೇಜಿನಲ್ಲಿ ಮೊನ್ನೆ ಬುಧವಾರ ಸಂಜೆ ವಿದ್ಯಾರ್ಥಿ ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದ ಬಳಿಕ ಬುರ್ಖಾ ಧರಿಸಿ ನಾಲ್ವರು ವೇದಿಕೆಯಲ್ಲಿ ಬಾಲಿವುಡ್ ಹಾಡಿಗೆ ನೃತ್ಯ ಮಾಡಿದ್ದರು. ಇದರ ವಿಡಿಯೋ ಚಿತ್ರೀಕರಣ ಮಾಡಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಭಾರಿ ಆಕ್ಷೇಪ ವ್ಯಕ್ತವಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕಾಲೇಜು ಆಡಳಿತ ಮಂಡಳಿ ಆಂತರಿಕ ವಿಚಾರಣೆಯ ಬಳಿಕ ನಾಲ್ವರು ವಿದ್ಯಾರ್ಥಿಗಳನ್ನು ಅಮಾನತು ಮಾಡಿದೆ.
ಸೋಷಿಯಲ್ ಮೀಡಿಯಾದಲ್ಲಿ ಅನೇಕರು ಇದನ್ನು ಬುರ್ಖಾದ ಅಪಹಾಸ್ಯ ಎಂದು ಟೀಕಿಸಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ ಸುಧೀರ್, ಕಾಲೇಜಿನ ಅಧಿಕೃತ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳು ನೃತ್ಯ ಮಾಡಿದ್ದಾರೆ. ಈ ನೃತ್ಯ ಕಾಲೇಜು ಕಾರ್ಯಕ್ರಮದ ಭಾಗವಾಗಿರಲಿಲ್ಲ. ಕಾಲೇಜು ಆವರಣದೊಳಗೆ ಯಾವ ಸಮುದಾಯಕ್ಕೂ ನೋವುಂಟು ಮಾಡುವ ಚಟುವಟಿಕೆಗಳಿಗೆ ಅವಕಾಶ ಇಲ್ಲ. ವಿದ್ಯಾರ್ಥಿಗಳು ಮಾಡಿದ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಸಾಕಷ್ಟು ಜನ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಂಡು ಕಾಲೇಜಿನಿಂದ ಅಮಾನತು ಮಾಡಲಾಗಿದೆ ಎಂದು ಹೇಳಿದ್ದಾರೆ.
St Joseph Engineering College at Vamanjoor in Mangaluru has suspended four male students pending enquiry after a video of them dancing in burqa went viral triggering an outrage in social media @SJEC_Mangaluru @vinndz_TNIE @XpressBengaluru @ramupatil_TNIE @santwana99 pic.twitter.com/q4YMghTPF3
— Divya Cutinho_TNIE (@cutinha_divya) December 8, 2022